ನಾಮಫಲಕ ಕನ್ನಡದಲ್ಲಿದ್ದರೆ ಸಾಲದು

sahithya
ಕಸಾಪ ಕುಂದಾಪುರ ತಾಲೂಕು ಘಟಕದ 19ನೇ ಕನ್ನಡ ಸಾಹಿತ್ಯ ಸಮ್ಮೇಳನ ತಾರ್ಕಣಿ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮೀ, ಸ್ವಾಗತ ಸಮಿತಿ ಅಧ್ಯಕ್ಷ ಮಹೇಶ ಹೆಗ್ಡೆ ಉಪಸ್ಥಿತರಿದ್ದರು
Published on

ವಿಜಯವಾಣಿ ಸುದ್ದಿಜಾಲ ಜನ್ನಾಡಿ

ನಾಮಫಲಕಗಳು ಶೇ.60ರಷ್ಟು ಕನ್ನಡದಲ್ಲಿ ಇದ್ದ ಮಾತ್ರಕ್ಕೆ ಕನ್ನಡ ಭಾಷೆ ಅಭಿವೃದ್ಧಿ ಆಗದು. ಕನ್ನಡ ಸಾಹಿತ್ಯ ಸಮ್ಮೇಳನದಂತಹ ಕಾರ್ಯಕ್ರಮಕ್ಕೆ ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಿದರೆ ಭಾಷಾ ಜಾಗೃತಿ ಮೂಡಿಸಲು ಸಾಧ್ಯ ಎಂದು ಶಾಸಕ ಕಿರಣ್‌ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು.
ಬಿದ್ಕಲ್‌ಕಟ್ಟೆ ಕೆ.ಪಿ.ಎಸ್ ಸಭಾಂಗಣದ ಮೊಳಹಳ್ಳಿ ಶಿವರಾವ್ ವೇದಿಕೆಯಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕದ 19ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ತಾರ್ಕಣಿ’ ಉದ್ಘಾಟಿಸಿ ಮಾತನಾಡಿದರು.

ಪ್ರೊ.ಬಾಲಕೃಷ್ಣ ಶೆಟ್ಟಿ ಬಿದ್ಕಲ್‌ಕಟ್ಟೆ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು. ನಿಕಟಪೂರ್ವ ಅಧ್ಯಕ್ಷ ಕೋಣಿ ಶಿವಾನಂದ ಕಾರಂತರ ಅನುಪಸ್ಥಿತಿಯಲ್ಲಿ ಅವರ ನುಡಿಯನ್ನು ಪತ್ರಕರ್ತ ಯು.ಎಸ್.ಶೆಣೈ ವಾಚಿಸಿದರು. ಸುಧಾಂತು ಮತ್ತು ಹೊಂಬೆಳಕು ಪುಸ್ತಕಗಳನ್ನು ಹಿರಿಯ ವೈದ್ಯ ಡಾ.ಭಾಸ್ಕರ ಆಚಾರ್ಯ ಬಿಡುಗಡೆ ಮಾಡಿದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ನೆರವೇರಿಸಿದರು. ವಿಶೇಷ ಪುರಸ್ಕೃತರಾಗಿ ಶ್ರೇಷ್ಠ ಸಾಧಕ ಮೂಡುಬಿದಿರೆ ಎಸ್‌ಕೆಎಫ್ ಎಂಡಿ ಡಾ.ರಾಮಕೃಷ್ಣ ಆಚಾರ್ಯ ಅವರನ್ನು ಗೌರವಿಸಲಾಯಿತು.

ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮೀ, ಸ್ವಾಗತ ಸಮಿತಿ ಅಧ್ಯಕ್ಷ ಮಹೇಶ ಹೆಗ್ಡೆ, ತಾಲೂಕು ಆರ್ಥಿಕ ಸಮಿತಿ ಅಧ್ಯಕ್ಷ ಬಿ.ಅರುಣಕುಮಾರ ಹೆಗ್ಡೆ, ಕಾರ್ಯದರ್ಶಿ ರಾಘವೇಂದ್ರ ಅಡಿಗ, ಪ್ರಾಂಶುಪಾಲ ವ್ನಿೇಶ್ವರ ಭಟ್, ಹಾರ್ದಳ್ಳಿ-ಮಂಡಳ್ಳಿ ಗ್ರಾಪಂ ಅಧ್ಯಕ್ಷೆ ದೀಪಾ ಶೆಟ್ಟಿ, ಹೊಂಬಾಡಿ-ಮಂಡಾಡಿ ಗ್ರಾಪಂ ಅಧ್ಯಕ್ಷೆ ಜಯಂತಿ, ಕಸಾಪ ಉಡುಪಿ ಜಿಲ್ಲೆ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಗೌರವ ಕಾರ್ಯದರ್ಶಿ ನರೇಂದ್ರ ಕುಮಾರ ಕೋಟ, ಗೌರವ ಕೋಶಾಧ್ಯಕ್ಷ ಮನೋಹರ ಪಿ.ಬ್ರಹ್ಮಾವರ ಘಟಕ ಕಸಾಪ ಅಧ್ಯಕ್ಷ ಗುಂಡ್ಮಿರಾಮ ಚಂದ್ರ, ಕಾಪು ಘಟಕ ಅಧ್ಯಕ್ಷ ಪುಂಡಲೀಕ ಮರಾಠೆ, ಉಡುಪಿ ಘಟಕ ಅಧ್ಯಕ್ಷ ರವಿರಾಜ್ ಎಚ್.ಪಿ., ಕಾರ್ಕಳ ಘಟಕ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಹೆಬ್ರಿ ಘಟಕ ಅಧ್ಯಕ್ಷ ಶ್ರೀನಿವಾಸ ಭಂಡಾರಿ, ಬೈಂದೂರು ಘಟಕ ಅಧ್ಯಕ್ಷ ಡಾ.ರಘು ನಾಯ್ಕ, ಕುಂದಾಪುರ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಅಕ್ಷತಾ ಗಿರೀಶ ಉಪಸ್ಥಿತರಿದ್ದರು.

ಡಾ.ಗಣೇಶ ಗಂಗೊಳ್ಳಿ ನಿರ್ದೇಶನದಲ್ಲಿ ಕೆ.ಪಿ.ಎಸ್.ಬಿದ್ಕಲ್‌ಕಟ್ಟೆ ವಿದ್ಯಾರ್ಥಿಗಳು ನಾಡಗೀತೆ, ರೈತಗೀತೆ ಹಾಡಿದರು. ಡಾ.ಉಮೇಶ ಪುತ್ರನ್ ಕುಂದಾಪುರ ಘಟಕ ಕಸಾಪ ಅಧ್ಯಕ್ಷ ಸ್ವಾಗತಿಸಿದರು. ಕಾರ್ಯದರ್ಶಿ ದಿನಕರ ಆರ್.ಶೆಟ್ಟಿ ನಿರೂಪಿಸಿದರು. ಅಧ್ಯಾಪಕ ಕೆಪಿಎಸ್ ಬಿದ್ಕಲ್‌ಕಟ್ಟೆ ಸತೀಶ ಶೆಟ್ಟಿಗಾರ್ ನಿರ್ವಹಣೆ ಮಾಡಿದರು. ಕುಂದಾಪುರ ಕಸಾಪ ಘಟಕ ಕೋಶಾಧ್ಯಕ್ಷ ಮಂಜುನಾಥ ಕೆ.ಎಸ್ ವಂದಿಸಿದರು.

ಶೋಭಾಯಾತ್ರೆ ಮೆರವಣಿಗೆ

ಮೊಳಹಳ್ಳಿ ಗ್ರಾಪಂ ಅಧ್ಯಕ್ಷ ಎಂ.ಚಂದ್ರಶೇಖರ ಶೆಟ್ಟಿ ರಾಷ್ಟ್ರ ಧ್ವಜಾರೋಹಣಗೈದರು. ಕಸಾಪ ಕುಂದಾಪುರ ಘಟಕ ಅಧ್ಯಕ್ಷ ಡಾ.ಉಮೇಶ ಪುತ್ರನ್ ಪರಿಷತ್ ಧ್ವಜಾರೋಹಣಗೈದರು. ಕೊಳನ್‌ಕಲ್ಲು ಶ್ರೀ ಮಹಾಗಣಪತಿ ದೇವಸ್ಥಾನ ಮಂಟಪದಿಂದ ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಲಾಯಿತು. ಉದ್ಯಮಿ ಎಂ.ದಿನೇಶ ಹೆಗ್ಡೆ ಮೊಳಹಳ್ಳಿ ಕನ್ನಡಮಾತೆ ಶ್ರೀ ಭುವನೇಶ್ವರಿ ದೇವಿಯ ಶೋಭಾಯಾತ್ರೆ ಮೆರವಣಿಗೆಗೆ ಚಾಲನೆ ನೀಡಿದರು.

ಕನ್ನಡ ನಾಡಿನ ಉದಯಕ್ಕಾಗಿ ಜೀವತೆತ್ತವರನ್ನು ಸ್ಮರಿಸಿ ಭಾಷೆ ಉಳಿವಿಗಾಗಿ ಪ್ರತಿಯೊಬ್ಬ ಕನ್ನಡಿಗ ಪಣತೊಡಬೇಕು. ಕನಿಷ್ಠ 7ನೇ ತರಗತಿಯವರೆಗೆ ಮಾತೃ ಭಾಷೆಯಲ್ಲಿ ಶಿಕ್ಷಣ ದೊರೆಯಬೇಕು. ನಮ್ಮ ಭಾಷೆ, ಸಂಸ್ಕೃತಿ ಉಳಿಯಬೇಕಾದರೆ ಮನೆಮಂದಿಯಲ್ಲಿ ಪರಿವರ್ತನೆ ಮುಖ್ಯ.-ಪ್ರೊ.ಬಾಲಕೃಷ್ಣ ಶೆಟ್ಟಿ ಬಿದ್ಕಲ್‌ಕಟ್ಟೆ ಸಮ್ಮೇಳನ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net