More

    1ರಿಂದ 5ನೇ ತರಗತಿ ಶಾಲೆ ಆರಂಭ: ನಿಯಮ ಉಲ್ಲಂಘಿಸಿದ ಸ್ಕೂಲ್​ಗಳ ಪರವಾನಗಿ ರದ್ದು!

    ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 1ರಿಂದ 5ನೇ ತರಗತಿಯ ಶಾಲೆಗಳು ತೆರೆಯಲಿ ಇನ್ನೂ ಅವಕಾಶ ಕೊಟ್ಟಿಲ್ಲ. ಆದರೂ ಕೆಲ ಖಾಸಗಿ ಶಾಲೆಗಳು ನಿಯಮ ಉಲ್ಲಂಘಿಸಿ ತೆರೆದಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕಿಡಿಕಾಡಿದ್ದಾರೆ.

    ‘ರಾಜ್ಯದಲ್ಲಿ ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1 ರಿಂದ 5ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವ ಬಗ್ಗೆ ದೂರುಗಳು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ಗೆ ಟ್ವೀಟ್​ ಮೂಲಕ ಡಾ.ಕೆ.ಸುಧಾಕರ್​ ಗುರುವಾರ ಮನವಿ ಮಾಡಿದ್ದಾರೆ. ಇದನ್ನೂ ಓದಿರಿ ಜಿಟಿಡಿ ಯಾವ ಪಕ್ಷದ ಶಾಸಕ? ಎಂದು ಕುಮಾರಸ್ವಾಮಿಗೆ ‘ಗೊತ್ತಿಲ್ಲ’ವಂತೆ!

    ಆರೋಗ್ಯ ಸಚಿವರ ಮನವಿಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ​ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಅದರ ಹಿಂದೆ ಮಕ್ಕಳ ಹಿತ, ಯೋಗಕ್ಷೇಮಗಳ ಕುರಿತು ಚಿಂತನೆ ಇರುತ್ತದೆ. ಸದ್ಯಕ್ಕೆ ರಾಜ್ಯದಲ್ಲಿ 6ನೇ ತರಗತಿಯಿಂದ 12ನೇ ತರಗತಿಯವರೆಗೆ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿವೆ. ಒಂದರಿಂದ 5ರವರೆಗೂ ತರಗತಿಗಳನ್ನು ಪ್ರಾರಂಭಿಸಲು ಆರೋಗ್ಯ ಇಲಾಖೆ ಸಮ್ಮತಿ ನೀಡಿಲ್ಲ ಎಂದು ವಿವರಿಸಿದ್ದಾರೆ.

    ಶಿಕ್ಷಣ ಇಲಾಖೆ ಇದನ್ನು ಆಧರಿಸಿ ನಿರ್ಧಾರ ಕೈಗೊಂಡಿದೆ. ಕೆಲ ಖಾಸಗಿ ಶಾಲೆಗಳಲ್ಲಿ ಸರ್ಕಾರದ ಆದೇಶ ಉಲ್ಲಂಘಿಸಿ 1ರಿಂದ 5ನೇ ತರಗತಿ ಮಕ್ಕಳಿಗೂ ಶಾಲೆ ನಡೆಸುತ್ತಿರುವ ಮಾಹಿತಿ ದೊರಕಿದೆ. ಎಲ್ಲ ಜಿಲ್ಲೆಗಳ ಉಪನಿರ್ದೇಶಕರಿಗೆ ಈ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಮಕ್ಕಳ ಯೋಗಕ್ಷೇಮಕ್ಕಾಗಿ ದೀರ್ಘ ಚಿಂತನೆ ನಡೆಸಿ ಕೈಗೊಂಡಿರುವ ಸರ್ಕಾರದ ನಿರ್ಧಾರ/ಆದೇಶವನ್ನು ಮೀರಿ ಯಾರಿಗೂ ತಾವೇ ನಿರ್ಧಾರ ಕೈಗೊಳ್ಳಲು ಅವಕಾಶವಿಲ್ಲ ಎಂದು ಎಚ್ಚರಿಸಿದ್ದಾರೆ.

    ರಾಜ್ಯದ ಜನತೆಗೆ ಎಚ್ಚರಿಕೆಯ ಗಂಟೆ ಬಾರಿಸಿದ ಸಚಿವ ಡಾ.ಸುಧಾಕರ್​!

    ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

    Video| ಕಪಾಳಕ್ಕೆ ಹೊಡೆದ ಪಿಎಸ್​ಐಗೆ ​ಯುವತಿ ಅವಾಜ್​! ನನ್​ ಗಾಡಿ ಮುಟ್ಟೋಕೆ ನೀನ್ಯಾರೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts