More

    2ಬಿ ಮೀಸಲಾತಿ ರದ್ದು ಖಂಡಿಸಿ ಪ್ರತಿಭಟನೆ

    ಬೆಳಗಾವಿ: ಮುಸ್ಲಿಂ ಸಮುದಾಯಕ್ಕೆ ನಿಗದಿಪಡಿಸಲಾಗಿರುವ 2ಬಿ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿರುವುದನ್ನು ಖಂಡಿಸಿ ಮಂಗಳವಾರ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ನೇತೃತ್ವದಲ್ಲಿ ಪ್ರತಿಭಟಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

    ಈಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಮುಸ್ಲಿಂ ಸಮುದಾಯಕ್ಕೆ 2ಬಿ ಪ್ರವರ್ಗದಡಿ ಶೇ.4 ಮೀಸಲಾತಿ ರದ್ದುಪಡಿಸಿ ಸಂವಿಧಾನ ವಿರೋಧಿ ನಿರ್ಣಯ ಕೈಗೊಂಡಿದೆ. ಈ ಮೀಸಲಾತಿ ರದ್ದುಪಡಿಸಲಾಗಿದ್ದು, ಲಿಂಗಾಯತ ಪಂಚಮಸಾಲಿ ಮತ್ತು ಒಕ್ಕಲಿಗ ಸಮುದಾಯ ವಿಭಜನೆಗೊಂಡಿವೆ. ಅದಕ್ಕೆ ಎರಡೂ ಸಮುದಾಯ ವಿರೋಧ ವ್ಯಕ್ತಪಡಿಸಿವೆ. ಮೀಸಲಾತಿ ರದ್ದತಿ ವಿರೋಧಿಸುತ್ತೇವೆ.

    ಸರ್ಕಾರ ತನ್ನ ನಿರ್ಧಾರ ಹಿಂಪಡೆಯುವವರೆಗೂ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಉಪಾಧ್ಯಕ್ಷ ಸಲೀಂ ಖತೀಬ್, ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts