2 ಲಕ್ಷಕ್ಕೂ ಅಧಿಕ ಮತಗಳಿಂದ ಬಿವೈಆರ್ ಗೆಲುವು

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪ್ರಾತಿನಿಧ್ಯ ನೀಡಿದ್ದರು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೂಡ ಹಿಂದುಳಿದ ವರ್ಗಗಳ ಪರವಾಗಿರುವುದರಿಂದ ಈ ಸಮುದಾಯ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬಿಜೆಪಿ ಹಿಂದುಳಿದ ವರ್ಗಗಳ ಪರವಾಗಿದೆ. ಜನ ಮೋದಿ ಅವರ ಕಾರ್ಯವೈಖರಿಯನ್ನು ಮೆಚ್ಚಿದ್ದಾರೆ. ವಾಲ್ಮೀಕಿ ಸಮಾಜವನ್ನು ಕಾಂಗ್ರೆಸ್​ನವರು ಒಡೆಯುತ್ತಿದ್ದಾರೆ. ಜಾತಿ ಹಾಗೂ ಧರ್ಮವನ್ನು ಎತ್ತಿಕಟ್ಟುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ವಾಲ್ಮೀಕಿ ಸಮಾಜದವರು ಸಂಘಟಿತರಾಗಲು ಸರ್ಕಾರದಿಂದ ವಾಲ್ಮೀಕಿ ಜಯಂತಿ ಆಚರಿಸಲು ಘೊಷಣೆ ಮಾಡಿದರು ಹಾಗೂ ಪ್ರತ್ಯೇಕವಾಗಿ ಎಸ್ಸಿ ನಿಗಮವನ್ನು ರಚಿಸಿದರು ಎಂದು ವಿವರಿಸಿದರು. ಪ್ರಮುಖರಾದ ವಿ.ರಾಜು, ಅರುಣ್​ಕುಮಾರ್, ಶಿವಪ್ಪ, ನಲ್ಲಿ ಶಿವಣ್ಣ, ಲೋಕೇಶ್, ಸುಮಿತ್ರಾ, ಅಬ್ದುಲ್ ಅಜೀಜ್, ಸುಜಾತಾ ಇದ್ದರು.

Leave a Reply

Your email address will not be published. Required fields are marked *