More

    ನರೇಗಾ ಯೋಜನೆಯಡಿ 2.17 ಕೋಟಿ ರೂ. ಖರ್ಚು

    ಹನೂರು: ನರೇಗಾ ಯೋಜನೆಯಡಿ ಕಳೆದ ಒಂದು ವರ್ಷದ ಅವಧಿಯಲ್ಲಿ ಲೊಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 234 ಕಾಮಗಾರಿಗಳು ನಡೆದಿದ್ದು, 2.17 ಕೋಟಿ ರೂ. ಅನುದಾನ ಖರ್ಚು ಮಾಡಲಾಗಿದೆ ಎಂದು ನರೇಗಾ ತಾಲೂಕು ಸಂಯೋಜಕ ಸಿದ್ದಪ್ಪಾಜಿ ತಿಳಿಸಿದರು.

    ತಾಲೂಕಿನ ಲೊಕ್ಕನಹಳ್ಳಿ ಗ್ರಾಪಂ ವತಿಯಿಂದ ಸೋಮವಾರ ಆಯೋಜಿಸಿದ್ದ ನರೇಗಾ ಯೋಜನೆಯ ಸಾಮಾಜಿಕ ಲೆಕ್ಕ ತಪಾಸಣಾ ಹಾಗೂ 15ನೇ ಹಣಕಾಸು ಯೋಜನೆಯ ಗ್ರಾಮಸಭೆಯಲ್ಲಿ ಮಾತನಾಡಿದರು.

    ನರೇಗಾ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಇದರಲ್ಲಿ ಪ್ರತಿ ಕುಟುಂಬವೂ ಉದ್ಯೋಗ ಪಡೆಯಬಹುದಾಗಿದೆ. ಕೃಷಿ ಹೊಂಡ ನಿರ್ಮಾಣ, ದನದ ಕೊಟ್ಟಿಗೆ, ಜಮೀನು ರಸ್ತೆ ಅಭಿವೃದ್ಧಿ ಸೇರಿದಂತೆ ಇನ್ನಿತರೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಆದ್ದರಿಂದ ಪ್ರತಿಯೊಬ್ಬರೂ ಯೋಜನೆಯ ಪ್ರಯೋಜನ ಪಡೆದುಕೊಳ್ಳವುದರ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

    ಯೋಜನೆಯಡಿ ಗ್ರಾಪಂ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ವಸತಿ ಯೋಜನೆಗೆ ಅನುದಾನ, ದನದ ಕೊಟ್ಟಿಗೆ, ಪೌಷ್ಟಿಕ ಕೈತೊಟ ನಿರ್ಮಾಣ, ಕೃಷಿ ಹೊಂಡ, ಸಿಸಿ ರಸ್ತೆ, ಚರಂಡಿ ನಿರ್ಮಾಣ, ಕೆರೆ, ಕಾಲುವೆ ಅಭಿವೃದ್ಧಿ, ಶಾಲಾ ಮೈದಾನ, ಸ್ಮಶಾನ ಅಭಿವೃದ್ಧಿ, ಆಸ್ಪತ್ರೆ ಆವರಣದಲ್ಲಿ ಉದ್ಯಾನವನ ನಿರ್ಮಾಣ ಸೇರಿದಂತೆ ಇನ್ನಿತರೆ ಕೆಲವು ಅಭಿವೃದ್ಧಿ ಕಾಮಗಾರಿ ನಡೆದಿದೆ. ತೋಟಗಾರಿಕೆ ಇಲಾಖೆ ವತಿಯಿಂದ ತೆಂಗು ಪ್ರದೇಶದ ಅಭಿವೃದ್ಧಿ ಕಾಮಗಾರಿ ಸೇರಿ 234 ಕಾಮಗಾರಿಗಳು ನಡೆದಿದ್ದು, ಕೂಲಿ ವೆಚ್ಚ 61 ಲಕ್ಷ ರೂ. ಹಾಗೂ ಸಾಮಗ್ರಿ ವೆಚ್ಚ 1.55 ಕೋಟಿ ಸೇರಿದಂತೆ 2.17 ಕೋಟಿ ರೂ. ಅನುದಾನ ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷೆ ನಂದಿನಿ, ಸದಸ್ಯರಾದ ಜ್ಯೋತಿಮಣಿ, ಮಹಾದೇವಿ, ಮಂಗಳಮ್ಮ, ಮುತ್ತುಸ್ವಾಮಿ, ಶಿವಕುಮಾರ್, ಸಿದ್ದರಾಜು, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಚಂದ್ರಕಲಾ, ಪಿಡಿಒ ರಘುನಾಥ್ ಹಾಗೂ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts