More

    2.30 ಲಕ್ಷ ರೂ. ಹಾಗೂ 13.20 ಲಕ್ಷ ರೂ. ಮೌಲ್ಯದ 220 ಗ್ರಾಂ ಬಂಗಾರ ವಶ

    ಚಿಕ್ಕಮಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ತೆರೆದಿರುವ ಚೆಕ್ ಪೋಸ್ಟ್ ಗಳಲ್ಲಿ 2.30 ಲಕ್ಷ ರೂ. ನಗದು ಹಾಗೂ 13.20 ಲಕ್ಷ ರೂ ಮೌಲ್ಯದ 220 ಗ್ರಾಂ ಬಂಗಾರವನ್ನು ಗುರುವಾರ ವಶಪಡಿಸಿಕೊಳ್ಳಲಾಗಿದೆ.

    ಚಿಕ್ಕಮಗಳೂರು ಹೊರವಲಯದ ಮಾಗಡಿ ಚೆಕ್ ಪೋಸ್ಟ್ ಬಳಿ ಕೆ ಎಸ್ ಆರ್ ಟಿ ಸಿ ಬಸ್ನಲ್ಲಿ ದಾಖಲೆ ಇಲ್ಲದೆ ಸಾಗಣೆ ಮಾಡುತ್ತಿದ್ದ 13.20 ಲಕ್ಷ ರೂ ಮೌಲ್ಯದ 220 ಗ್ರಾಂ ಬಂಗಾರದ ಒಡವೆಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಒಂದು ಜೊತೆ ಬಂಗಾರದ ಬಳೆ, ಎರಡು ನೆಕ್ಲೆಸ್, ಒಂದು ಎಳೆಯ ಚೈನ್ ಒಂದು, ಅರವತ್ತು ಗುಂಡುಗಳು, ಏಳು ಉಂಗುರ, ಐದು ತಾಳಿ ಮತ್ತು ಒಂದು ಡಾಲರ್ ಸೇರಿದಂತೆ ಇತರೆ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಇನ್ನು ಬಸಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಣೆ ಮಾಡುತ್ತಿದ್ದ ಒಂದು ಲಕ್ಷ ರೂಪಾಯಿ ಹಾಗೂ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಅಹಮದ್ ನಗರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಣೆ ಮಾಡುತ್ತಿದ್ದ 1.30 ಲಕ್ಷ ರೂಪಾಯಿ ಹಣವನ್ನು ಚೆಕ್ ಪೋಸ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts