More

    ಸಿದ್ಧಾರೂಢ ಮಠಕ್ಕೆ 2.5 ಟನ್ ಅಕ್ಕಿ ಅರ್ಪಣೆ

    ಹುಬ್ಬಳ್ಳಿ: ಕೆಎಲ್​ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಿಂದ ಆರಂಭಿಸಿದ್ದ ‘ಒಂದು ಮುಷ್ಟಿ ಅಕ್ಕಿ ಅಭಿಯಾನ’ವನ್ನು ನಗರದ ಶ್ರೀ ಸಿದ್ಧಾರೂಢ ಸ್ವಾಮಿಗಳ ಮಠದಲ್ಲಿ ಸೋಮವಾರ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಸಂಗ್ರಹಿಸಿದ 6 ಸಾವಿರ ಕೆ.ಜಿ. (6 ಟನ್) ಅಕ್ಕಿಯಲ್ಲಿ ಎರಡೂವರೆ ಟನ್ ಅಕ್ಕಿಯನ್ನು ಶ್ರೀಮಠಕ್ಕೆ ಅರ್ಪಿಸಲಾಯಿತು.

    ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಬಸವಾದಿ ಶರಣರು ಹಾಕಿಕೊಟ್ಟ ದಾಸೋಹ ತತ್ತ್ವನ್ನು ವಿದ್ಯಾರ್ಥಿಗಳು ಚಾಚೂ ತಪ್ಪದೆ ಪಾಲಿಸಿದ್ದಾರೆ. ಬಡವರಿಗೆ ಅಕ್ಕಿ ಹಂಚುವುದು ಎಂದರೆ ಸಾಮಾನ್ಯ ಮಾತಲ್ಲ ಎಂದು ಹೇಳಿದರು.

    ಕೆಎಲ್​ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಾಬೂನು ಮತ್ತು ಮಾರ್ಜಕ ನಿಗಮ ಅಧ್ಯಕ್ಷ ಮಲ್ಲಿಕಾರ್ಜುನ ಸಾವಕಾರ, ಶ್ರೀ ಸಿದ್ಧಾರೂಢ ಸ್ವಾಮಿಗಳ ಮಠ ಟ್ರಸ್ಟ್ ಕಮಿಟಿ ಚೇರ್ಮನ್ ಡಿ.ಡಿ. ಮಾಳಗಿ, ಕಾಲೇಜಿನ ಪ್ರಾಚಾರ್ಯ ಪ್ರೊ.ಎಸ್.ಎ. ಗಣಿ, ಡಾ.ಡಿ.ವಿ. ಹೊನಗಣ್ಣವರ ಇತರರು ಇದ್ದರು. ಎನ್​ಎಸ್​ಎಸ್ ಅಧಿಕಾರಿ ವಿ.ಎಸ್. ಕಟ್ಟಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಮಲ್ಲಮ್ಮ ಯಾಟಗಲ್ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts