More

    2.70 ಕೋಟಿ ರೂ. ಅನುದಾನ ಬಿಡುಗಡೆ

    ಚನ್ನರಾಯಪಟ್ಟಣ(ಬಾಗೂರು): ತಾಲೂಕಿನ ಸರ್ಕಾರಿ ಶಾಲೆಗಳ 20 ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ 2.70 ಕೋಟಿ ರೂ. ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

    ತಾಲೂಕಿನ ಚನ್ನೇನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪ್ರಾಥಮಿಕ ಕಿರಿಯ ಪಾಠಶಾಲೆಯ ಹೆಚ್ಚುವರಿ ಕೊಠಡಿಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, ಇನ್ನೂ 50 ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.

    3 ವರ್ಷಗಳ ಹಿಂದೆ ಭಾರಿ ಮಳೆಯಿಂದ ಶಾಲಾ ಕಟ್ಟಡದ ಗೋಡೆ ಶಿಥಿಲಗೊಂಡು ಕುಸಿದು ಬಿದ್ದಿತ್ತು. ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಅಂಗನವಾಡಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಸದ್ಯ ಇಂದಿನಿಂದ ಹೊಸ ಕಟ್ಟಡದಲ್ಲಿ ತರಗತಿಗಳು ಮುಂದುವರಿಯಲಿದೆ ಎಂದು ತಿಳಿಸಿದರು.

    ಕಳೆದ ವರ್ಷ ಒಂದು ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲಾಗಿತ್ತು. ಈ ವರ್ಷವೂ ಹೆಚ್ಚುವರಿ ಕೊಠಡಿ ಉದ್ಘಾಟಿಸಲಾಗಿದೆ. ಮಕ್ಕಳ ದಾಖಲಾತಿ ಹೆಚ್ಚಳದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಇನ್ನೊಂದು ಕೊಠಡಿ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.

    ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆಯಡಿ ಶಾಲಾ ಕಾಂಪೌಂಡನ್ನು ನಿರ್ಮಾಣ ಮಾಡಲಾಗಿದೆ. ಗ್ರಾಮದಲ್ಲಿ ಉತ್ತಮ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಲಾಗಿದೆ. ಚನ್ನೇನಹಳ್ಳಿ ಗ್ರಾಮದಿಂದ ಕಾರೇಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ ಅನುದಾನ ನೀಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts