ಪಾಕ್​ನಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಗುಂಡೇಟಿಗೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಶುಕ್ರವಾರ ಮಧ್ಯಾಹ್ನ 11.55ರ ಸುಮಾರಿಗೆ ಕುಪ್ವಾರ ಜಿಲ್ಲೆಯ ಕೀರನ್​ ಸೆಕ್ಟರ್​ನಲ್ಲಿ ಪಾಕ್​ ಸೇನೆ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದೆ. ಪಾಕ್​ ಗುಂಡು ತಗುಲಿ ಓರ್ವ ಯೋಧ ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬ ಯೋಧ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಮ್ಮ ಸೈನಿಕರು ಪಾಕ್​ ಸೈನಿಕರ ಗುಂಡೇಟಿಗೆ ತಕ್ಕ ಪ್ರತಿಕ್ರಿಯೆ ನೀಡಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)