

ಚೆನ್ನೈ: ಎರಡು ಖಾಸಗಿ ಬಸ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು, 70ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.
ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಸ್ನ ಮುಂಭಾಗದ ಟೈರ್ ಬರ್ಸ್ಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಎರಡು ಖಾಸಗಿ ಬಸ್‌ಗಳು ಕಡಲೂರು ಮತ್ತು ಪನ್ರುತಿ ನಡುವೆ ಸಂಚರಿಸುತ್ತಿದ್ದವು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕಡಲೂರಿನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬಗಳಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ 2 ಲಕ್ಷ ರೂ., ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.