More

    2 ಕೋಟಿ ಹೆಚ್ಚುವರಿ ಮನೆ ನಿರ್ಮಾಣ: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನ ವಿಸ್ತರಣೆ

    ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಹೆಚ್ಚುವರಿಯಾಗಿ 2 ಕೋಟಿ ಮನೆಗಳನ್ನು ಬಡವರಿಗಾಗಿ ನಿರ್ಮಾಣ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಣೆ ಮಾಡಿದರು.

    ಇಂದು ಮಧ್ಯಂತರ ಬಜೆಟ್​ ಮಂಡನೆ ಮಾಡುತ್ತಿರುವ ಸೀತಾರಾಮನ್​, ಕೋವಿಡ್​ ಸಾಂಕ್ರಮಿಕ ಸವಾಲುಗಳ ನಡುವೆಯೂ, ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅನುಷ್ಠಾನವು ಮುಂದುವರಿದಿದೆ ಎಂದರು.

    ನಾವು 3 ಕೋಟಿ ಮನೆಗಳ ಗುರಿಯನ್ನು ಸಾಧಿಸುವ ಸಮೀಪದಲ್ಲಿ ಇದ್ದೇವೆ ಮತ್ತು ಮುಂದಿನ 5 ವರ್ಷಗಳಲ್ಲಿ ಹೆಚ್ಚುವರಿಯಾಗಿ 2 ಕೋಟಿ ಮನೆಗಳನ್ನು ಪೂರೈಸಲು ಕ್ರಮ ತೆಗೆದುಕೊಳ್ಳಲಾಗುವುದು. ದೇಶದ ಜನಸಂಖ್ಯೆ ಏರಿಕೆಯಿಂದಾಗಿ ಕುಟುಂಬಗಳು ಸಹ ದೊಡ್ಡದಾಗಿದ್ದು, ಹೆಚ್ಚುವರಿ ಮನೆಗಳ ಅವಶ್ಯಕತೆ ಇದೆ ಎಂದು ತಿಳಿಸಿದರು. ಅಲ್ಲದೆ, ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ ಎಂದರು.

    ಇದೇ ಸಂದರ್ಭದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಪ್ರಸ್ತಾಪ ಮಾಡಿದ ಸೀತಾರಾಮನ್​ ಅವರು ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನಗಳ ವಿಸ್ತರಣೆ ಮಾಡಲಾಗುತ್ತದೆ ಎಂದರು. ಕೃಷಿ ಕ್ಷೇತ್ರದ ಮತ್ತಷ್ಟು ಬೆಳವಣಿಗೆಗಾಗಿ, ಕೃಷಿ ನಂತರದ ಚಟುವಟಿಕೆಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ಹೂಡಿಕೆಯನ್ನು ಇನ್ನಷ್ಟು ಉತ್ತೇಜಿಸಲು ಸರ್ಕಾರವು ಕ್ರಮ ಕೈಗೊಳ್ಳಿದೆ ಎಂದು ತಿಳಿಸಿದರು. (ಏಜೆನ್ಸೀಸ್​)

    ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗವಹಿಸುವಿಕೆ 10 ವರ್ಷಗಳಲ್ಲಿ ಶೇ. 28 ಹೆಚ್ಚಳ: ನಿರ್ಮಲಾ ಸೀತಾರಾಮನ್​

    ಲೋಕಸಭಾ ಸಮರ 2024: ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ BJP, ಹೊಸ ಪ್ರಯೋಗಕ್ಕೆ ಮುಂದಾಗುತ್ತಾ ಕಮಲ ಪಡೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts