More

    ಇನ್ನು ರಾಜ್ಯದಲ್ಲಿ ಹಿಂಗಾರು ಮಳೆ ಶುರು… 2 ದಿನ ನಿರಂತರ ವರ್ಷಧಾರೆ

    ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮುಗಿದಿದ್ದು, ಸೋಮವಾರದಿಂದ(ಅ.25) ಈಶಾನ್ಯ ಮಾರುತ (ಹಿಂಗಾರು ಮಳೆ) ಶುರುವಾಗಿದೆ. ಈಗಾಗಲೇ ತಮಿಳುನಾಡಿನ ದಕ್ಷಿಣ ಭಾಗಗಳಲ್ಲಿ ಹಿಂಗಾರು ಮಳೆಯಾಗಿದೆ. ಈಶಾನ್ಯ ದಿಕ್ಕಿನಿಂದ ಪಶ್ಚಿಮ ಕಡೆಗೆ ಗಾಳಿ ಬೀಸಲಾರಂಭಿಸಿದೆ ಎಂದು ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.

    ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ರಾಮನಗರದಲ್ಲಿ ಅ.26 ಮತ್ತು 27 ರಂದು ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    “ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್​ ಸಂತ್ರಸ್ತರಿಗೆ ನ್ಯಾಯ ಸಿಗೋವರೆಗೂ ಹೋರಾಟ”

    ಫಾಲ್ಕೆ ಪ್ರಶಸ್ತಿ ಪಡೆದ ರಜನೀಕಾಂತ್;​ ಕರ್ನಾಟಕ ಸಾರಿಗೆ ಬಸ್​ ಚಾಲಕನ್ನನ್ನು ನೆನೆದರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts