ಇನ್ನು ರಾಜ್ಯದಲ್ಲಿ ಹಿಂಗಾರು ಮಳೆ ಶುರು… 2 ದಿನ ನಿರಂತರ ವರ್ಷಧಾರೆ

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮುಗಿದಿದ್ದು, ಸೋಮವಾರದಿಂದ(ಅ.25) ಈಶಾನ್ಯ ಮಾರುತ (ಹಿಂಗಾರು ಮಳೆ) ಶುರುವಾಗಿದೆ. ಈಗಾಗಲೇ ತಮಿಳುನಾಡಿನ ದಕ್ಷಿಣ ಭಾಗಗಳಲ್ಲಿ ಹಿಂಗಾರು ಮಳೆಯಾಗಿದೆ. ಈಶಾನ್ಯ ದಿಕ್ಕಿನಿಂದ ಪಶ್ಚಿಮ ಕಡೆಗೆ ಗಾಳಿ ಬೀಸಲಾರಂಭಿಸಿದೆ ಎಂದು ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ರಾಮನಗರದಲ್ಲಿ ಅ.26 ಮತ್ತು … Continue reading ಇನ್ನು ರಾಜ್ಯದಲ್ಲಿ ಹಿಂಗಾರು ಮಳೆ ಶುರು… 2 ದಿನ ನಿರಂತರ ವರ್ಷಧಾರೆ