ಪ್ರಕಾಶ್ ಸಿಂಗ್ ಬಾದಲ್ ನಿಧನ; ಎರಡು ದಿನ ರಾಷ್ಟ್ರೀಯ ಶೋಕಾಚರಣೆ…

prakash badal singh
Published on

ನವದೆಹಲಿ: ಮಾಜಿ ಸಿಎಂ ಮತ್ತು ಶಿರೋಮಣಿ ಅಕಾಲಿದಳದ ಪೋಷಕ ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದಿನಿಂದ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ಅಧಿಕೃತ ಘೋಷಣೆ

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (MHA) “ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಶ್ರೀ ಪ್ರಕಾಶ್ ಸಿಂಗ್ ಬಾದಲ್ ಅವರು 25 ಏಪ್ರಿಲ್ 2023 ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರವು ಏಪ್ರಿಲ್ 26 ಮತ್ತು 27 ರಂದು ಭಾರತದಾದ್ಯಂತ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಆಚರಿಸಲಾಗುತ್ತದೆ" ಎಂದು ಅಧಿಕೃತವಾಗಿ ಹೇಳಿದೆ.

ಅಧಿಸೂಚನೆಯಲ್ಲಿ ಏನಿದೆ?

ಅಧಿಸೂಚನೆಯಲ್ಲಿ, MHA "ಶೋಕಾಚರಣೆಯ ದಿನಗಳಲ್ಲಿ ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಈ ಎರಡು ದಿನಗಳಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ" ಎಂದು ಹೇಳಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net