ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ದಾಳಿ; ಇಬ್ಬರು ಸಾವು, ನಾಲ್ವರಿಗೆ ಗಾಯ

ಪಶ್ಚಿಮ ಬಂಗಾಳ: ಸೋಮವಾರ ರಾತ್ರಿ ನಡೆದ ಬಾಂಬ್‌ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕನ್ಕಿನಾರ ಪ್ರದೇಶದಲ್ಲಿ ನಡೆದಿದೆ. ಮೂಲಗಳ ಪ್ರಕಾರ ದುಷ್ಕರ್ಮಿಗಳು ಕಚ್ಚಾ ಬಾಂಬ್‌ನ್ನು ಎಸೆದಿದ್ದಾರೆ.

ಈ ಪ್ರದೇಶದಲ್ಲಿ ರಾಬರಿಗಳು ಕೂಡ ಹೆಚ್ಚಾಗುತ್ತಿರುವುದು ಕೂಡ ನಮ್ಮ ಆತಂಕಕ್ಕೆ ಕಾರಣವಾಗಿದ್ದು, ಆಡಳಿತಾಂಗವು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಸದ್ಯ ಸ್ಥಳದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಬಾರಕ್‌ಪುರ ಲೋಕಸಭಾ ಕ್ಷೇತ್ರದ ಅಡಿಯಲ್ಲಿ ಬರುವ ಕಂಕಿನಾರ ಪ್ರದೇಶವು ಮಾಜಿ ತೃಣಮೂಲ ಕಾಂಗ್ರೆಸ್‌ ಸಂಸದ ಅರ್ಜುನ್‌ ಸಿಂಗ್ ಅವರು ಬಿಜೆಪಿಗೆ ಸೇರಿಕೊಂಡು ಹಾಲಿ ಸಂಸದರಾಗಿದ್ದ ತೃಣಮೂಲ ಸಂಸದ ದಿನೇಶ್‌ ತ್ರಿವೇದಿ ಅವರನ್ನು ಸೋಲಿಸಿದ ಬಳಿಕ ತೃಣಮೂಲ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಹಿಂಸಾಚಾರ ಭುಗಿಲೆದ್ದಿದೆ. (ಏಜೆನ್ಸೀಸ್)

Leave a Reply

Your email address will not be published. Required fields are marked *