ಸೇನೆಯನ್ನು ಗುರಿಯಾಗಿಸಿ ಉಗ್ರರಿಂದ IED ಸ್ಫೋಟ; ಇಬ್ಬರು ಯೋಧರು ಹುತಾತ್ಮ

Indian Army
Published on

ಶ್ರೀನಗರ: ಜಮ್ಮು-ಕಾಶ್ಮೀರದ ಅಖ್ನೂರ್ ಸೆಕ್ಟರ್​ನಲ್ಲಿ ಸೇನೆಯನ್ನು ಗುರಿಯಾಗಿಸಿ ಉಗ್ರರು ಶಂಕಿತ ಸುಧಾರಿತ ಸ್ಫೋಟಕ ಸಾಧನ (IED) ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿರುವುದಾಗಿ ವರದಿಯಾಗಿದೆ. ಸೇನೆಯ ವೈಟ್ ನೈಟ್ ಕಾರ್ಪ್ಸ್ ವಿಭಾಗವು ಈ ಬಗ್ಗೆ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದೆ. 

ಪ್ರಕಟಣೆಯಲ್ಲಿ ತಿಳಿಸಿರುವ ಪ್ರಕಾರ, ಪ್ರಾಥಮಿಕ ತನಿಖೆ ಪ್ರಕಾರ ಭಯೋತ್ಪಾಕದರು ನೆಲದಲ್ಲಿ ಅಡಗಿಸಿ ಸ್ಫೋಟಿಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ಧಾರೆ. ಪ್ರದೇಶದ ಸುತ್ತ ಸೇನೆ ಸುತ್ತುವರೆದಿದ್ದು, ಉಗ್ರರನ್ನು ಪತ್ತೆಹಚ್ಚಲಾಗುತ್ತಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net