More

    ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿ ಅಪಹರಿಸಿದ ಪಾಕಿಸ್ತಾನ; ಸೇಡಿನ ಕ್ರಮ ಶಂಕೆ

    ನವದೆಹಲಿ: ಇಸ್ಲಾಮಾಬಾದ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಪಾಕಿಸ್ತಾನದ ಗುಪ್ತಚರ ಇಲಾಖೆ ಅಧಿಕಾರಿಗಳು ಅಪಹರಿಸಿದ್ದಾರೆ. ಭಾರತದ ವಿರುದ್ಧ ಸೇಡಿನ ಕ್ರಮವಾಗಿ ಈ ಕೃತ್ಯ ಎಸಗಲಾಗಿದೆ ಎಂದು ಶಂಕಿಸಲಾಗಿದೆ.

    ಸೋಮವಾರ ಬೆಳಗ್ಗೆ ಇಬ್ಬರು ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿ ತಲುಪಿಲ್ಲ. ಇದರಿಂದ ಆತಂಕಗೊಂಡ ಅಧಿಕಾರಿಗಳು ನವದೆಹಲಿಯಲ್ಲಿರುವ ಭಾರತೀಯ ವಿದೇಶಾಂಗ ಕಚೇರಿಯ ಹಿರಿಯ ಅಧಿಕಾರಿಗಳು ಹಾಗೂ ಇಸ್ಲಾಮಾಬಾದ್​ನ ಪಾಕ್​ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ ಎಂದು ಪಾಕ್​ ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ; ಮಹಿಳೆಯರಿಗಿನ್ನು ಹದಿನೆಂಟಲ್ಲ, ಮದುವೆ ವಯಸ್ಸು 21…! 

    ಪಾಕಿಸ್ತಾನದ ಗುಪ್ತಚರ ಇಲಾಖೆ ಇಬ್ಬರನ್ನು ಅಪಹರಿಸಿದ್ದು, ‘ಗೂಢಚಾರರು’ ಎಂಬ ಹಣೆಪಟ್ಟಿ ಕಟ್ಟಲು ಈ ಕೃತ್ಯ ಎಸಗಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.

    ಕಳೆದ ಮೇ 31ರಂದು ಗೂಢಚಾರ ಎಸಗುತ್ತಿದ್ದ ನವದೆಹಲಿಯ ಪಾಕ್​ ರಾಯಭಾರ ಕಚೇರಿಯ ಸಹಾಯಕ ಸಿಬ್ಬಂದಿ ಅಬಿದ್​ ಹುಸೇನ್​ ಅಬಿದ್​, ಗುಮಾಸ್ತ ಮಹಮ್ಮದ್​ ತಾಹೀರ್​ ಖಾನ್​ ಹಾಗೂ ಚಾಲಕ ಜಾವೀದ್​ ಹುಸೇನ್​ ಎಂಬುವರನ್ನು ಬಂಧಿಸಲಾಗಿತ್ತು. ಇವರು, ರಕ್ಷಣಾ ಇಲಾಖೆ ರೈಲ್ವೆ ಇಲಾಖೆ ಸಿಬ್ಬಂದಿಯೊಂದಿಗೆ ಸಂಪರ್ಕದಲ್ಲಿದ್ದು, ರಹಸ್ಯ ಮಾಹಿತಿ ಕಲೆ ಹಾಕಿದ್ದರು. ಬಳಿಕ ಇವರನ್ನು ಪಾಕ್​ಗೆ ವಾಪಸ್​ ಕಳುಹಿಸಲಾಗಿತ್ತು. ಇದರ ವಿರುದ್ಧ ಪಾಕ್​ ಸೇಡು ತೀರಿಸಿಕೊಳ್ಳಲು ಮುಂದಾಗಿದೆ ಎಂದೇ ವಿಶ್ಲೇಷಿಸಲಾಗಿದೆ.

    ಇದನ್ನೂ ಓದಿ; ವೃದ್ಧನ ಕರೊನಾ ಚಿಕಿತ್ಸೆಗೆ ಖರ್ಚಾದ ಮೊತ್ತದಿಂದ ಆಸ್ಪತ್ರೆಯನ್ನೇ ಕಟ್ಟಿಸಬಹುದಿತ್ತು…! 

    ಪಾಕ್​ ಐಎಸ್​ಐ ಅಧಿಕಾರಿಗಳು ಬಂಧಿತರಿಗೆ ಚಿತ್ರಹಿಂಸೆ ನೀಡುವಲ್ಲಿ ಎತ್ತಿದ ಕೈ. ಹೀಗಾಗಿ ಭಾರತೀಯ ಅಧಿಕಾರಿಗಳ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತವಾಗಿದೆ.

    ಬದುಕು ಕ್ಷಣಿಕ ಎಂದಿದ್ದೇಕೆ ಸುಶಾಂತ್​ ಸಿಂಗ್​; ಅಮ್ಮನ ನೆನೆದು ಬಾರದ ಲೋಕಕ್ಕೆ ಪಯಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts