ತಮಿಳುನಾಡಿನ ವಿವಿಧ ಕಡೆ ವರ್ಷಧಾರೆ: ಸಿಡಿಲು ಬಡಿದು ಇಬ್ಬರು ಮೃತ್ಯು, ಸಾವಿನ ಸಂಖ್ಯೆ 4ಕ್ಕೆ ಏರಿಕೆ

2 Min Read
tn

ಚೆನ್ನೈ: ಸಿಡಿಲು ಬಡಿದು ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೂತುಕುಡಿ ಮತ್ತು ಸೇಲಂ ಜಿಲ್ಲೆಗಳಲ್ಲಿ ನಡೆದಿದೆ. ಈ ಮಾನ್ಸೂನ್ ಋತುವಿನಲ್ಲಿ ತಮಿಳುನಾಡಿನಲ್ಲಿ ಈ ಮೂಲಕ ಮಳೆ ಸಂಬಂಧಿತ ಸಾವಿನ ಸಂಖ್ಯೆ 4ಕ್ಕೆ ತಲುಪಿದೆ.

ಇದನ್ನೂ ಓದಿ: ಜಿ7 ಶೃಂಗಸಭೆಯಲ್ಲಿ ಜಾಗತಿಕ ಶಾಂತಿ, ಭದ್ರತೆ ಬಗ್ಗೆ ಮಾತನಾಡುವೆ: ಪ್ರಧಾನಿ ಮೋದಿ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತಮಿಳುನಾಡು ಹಾಗೂ ಕೇರಳದಲ್ಲಿ ಇಂದು ಮಳೆಯ ಅಬ್ಬರ ಮುಂದುವರೆದಿದೆ. ಭಾರೀ ಮಳೆಯಿಂದ ಕೆಲವೆಡೆ ರೆಡ್ ಅಲರ್ಟ್ ಕೂಡ ಘೋಷಿಸಲಾಗಿದೆ.

ಈ ಹಿಂದೆ ತೆಂಕಶಿ ಜಿಲ್ಲೆಯ ಕುಟ್ರಾಲಂ ಜಲಪಾತದಲ್ಲಿ 17 ವರ್ಷದ ಬಾಲಕನೊಬ್ಬ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ. ಮಧುರೈನಲ್ಲಿ ಛಾವಣಿ ಕುಸಿದು ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದ. ಈವರೆಗೆ ಏಳು ಗುಡಿಸಲುಗಳು ಹಾಗೂ 14 ಜಾನುವಾರುಗಳಿಗೆ ಹಾನಿಯಾಗಿದೆ.

ದಕ್ಷಿಣ, ಪಶ್ಚಿಮ ಮತ್ತು ಡೆಲ್ಟಾ ಪ್ರದೇಶಗಳಲ್ಲಿನ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ರಾಮನಾಥಪುರಂ ಜಿಲ್ಲೆಯ ಕಮುದಿಯಲ್ಲಿ 12.44 ಸೆಂ.ಮೀ ಮಳೆಯಾಗಿದ್ದರೆ, ಮಧುರೈನ ತಲ್ಲಕುಲಂನಲ್ಲಿ 10.8 ಸೆಂ.ಮೀ, ತಿರುಚ್ಚಿಯ ಪುಲ್ಲಂಬಾಡಿಯಲ್ಲಿ 9.8 ಸೆಂ.ಮೀ ಮಳೆಯಾಗಿದೆ.
ಮಂಗಳವಾರ ಕನ್ಯಾಕುಮಾರಿ, ಥೇಣಿ, ತಿರುನಲ್ವೇಲಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ವಿರುದುನಗರ, ತಿರುಪ್ಪೂರ್, ಕೊಯಮತ್ತೂರು, ನೀಲಗಿರಿ ಮತ್ತು ದಿಂಡಿಗಲ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಮೂರು ದಿನಗಳ ಕಾಲ ತಮಿಳುನಾಡಿನ ದಕ್ಷಿಣ, ಪಶ್ಚಿಮ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ತಮಿಳುನಾಡು ಸರ್ಕಾರವು ಕನ್ನಿಯಾಕುಮಾರಿ, ಕೊಯಮತ್ತೂರು ಮತ್ತು ನೀಲಗಿರಿ ಜಿಲ್ಲೆಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು ನಿಯೋಜಿಸಲಾಗಿದೆ.

See also  ತಮಿಳುನಾಡು ವಿರುದ್ಧದ ಪಂದ್ಯಕ್ಕೆ ನಾಯಕ ಮಯಾಂಕ್​ ಅಗರ್ವಾಲ್​ ಫಿಟ್​

ಗಂಟೆಗೆ 40 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಐದು ದಿನಗಳ ಕಾಲ ಸಮುದ್ರದಿಂದ ದೂರ ಉಳಿಯುವಂತೆ ಸೂಚನೆ ನೀಡಲಾಗಿದೆ. ಮೇ 22ರಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಉಂಟಾಗಲಿದ್ದು, 24ರಂದು ಅದು ವಾಯುಭಾರ ಕುಸಿತವಾಗಿ ಬದಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 23ರೊಳಗೆ ಮರಳಿ ಬರುವಂತೆ ಆಳಸಮುದ್ರದ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚಿಸಿದೆ.

ಗುಜರಾತ್​ನಲ್ಲಿ ಆತ್ಮಾಹುತಿ ದಾಳಿ ಸಂಚು: ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರ ಬಂಧನ

Share This Article