VIDEO| ನೋಡ ನೋಡುತ್ತಿದ್ದಂತೆ ಕಾರುಗಳ ಮೇಲೆ ಪಲ್ಟಿಯಾದ ಲಾರಿ; ಇಬ್ಬರು ಮೃತ್ಯು

Truck Accident
Published on

ಶಿಮ್ಲಾ: ಭೀಕರ ರಸ್ತೆ ಅಪಘಾತ ಒಂದರಲ್ಲಿ ತಿರುವು ತೆಗೆದುಕೊಳ್ಳುವ ವೇಳೆ ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಾರುಗಳ ಮೇಲೆ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದಿದೆ.

ಅಪಘಾತವು ತಿಯೋಗ್​-ಚೈಲಾ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ 4-5 ಕಾರುಗಳು ಸಂಪೂರ್ಣವಾಗಿ ಜಖಂಗೊಂಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರುಗಳ ಮೇಲೆ ಪಲ್ಟಿಯಾಗುತ್ತಿರುವುದು ಕಂಡು ಬರುತ್ತದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಿಂದ ವ್ಯಕ್ತಿಗಳಿಬ್ಬರು ಹೊರಬರುತ್ತಿರುವುದು ಕಂಡು ಬರುತ್ತದೆ. ಟ್ರಾಫಿಕ್​ ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿತ್ತಾದರು ಅವರ ಕಣ್ಣೆಡುರಲ್ಲೇ ಈ ಘಟನೆ ನಡೆದಿರುವುದಕ್ಕೆ ಎಲ್ಲರೂ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net