Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ಮ್ಯಾನ್‌ ಹೋಲ್‌ ಸ್ವಚ್ಛತೆಗೆ ಇಳಿದಿದ್ದ ಇಬ್ಬರು ಕಾರ್ಮಿಕರ ಸಾವು

Tuesday, 13.02.2018, 8:51 PM       No Comments

ಬೆಂಗಳೂರು: ವಾಣಿಜ್ಯ ಮಳಿಗೆಯೊಂದರ ಕೊಳಚೆ ಗುಂಡಿ ಕ್ಲೀನ್‌ ಮಾಡುವಾಗ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ರಾಯಚೂರು ಮೂಲದ ರಾಮು(35)ಮತ್ತು ರವಿ(28)ಮೃತರು. ಎಇಸಿಎಸ್‌ ಲೇಔಟ್‌ ಬಳಿಯ ವಾಣಿಜ್ಯ ಮಳಿಗೆಯ ಕೊಳಚೆ ಗುಂಡಿ ಕ್ಲೀನ್‌ ಮಾಡಲು ಬಂದಿದ್ದರು. ರಾಮು ಕೊಳಚೆ ಗುಂಡಿಗೆ ಇಳಿದು ಕ್ಲೀನ್ ಮಾಡುತ್ತಿದ್ದ ವೇಳೆ ಉಸಿರುಗಟ್ಟಿ ಕೂಗಾಡಿದ್ದಾನೆ. ರಾಮುವನ್ನು ರಕ್ಷಿಸಲು ಹೋದ ರವಿ ಕೂಡ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ.

ಎಚ್‌ಎಎಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರು ಹೋಟೆಲ್‌ ಮ್ಯಾನೇಜರ್‌ ಅಯೂಶ್ ಗುಪ್ತಾ, ಕಟ್ಟಡದ ನಿರ್ವಹಣೆಕಾರ ವೆಂಕಟೇಶ್ ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top