ಆಹಾರ ನುಂಗಲು ಕಷ್ಟಪಡುತ್ತಿದ್ದ ವ್ಯಕ್ತಿಯ ಅನ್ನನಾಳದಲ್ಲಿ ಸಿಕ್ತು 100ರೂ. 2 ನೋಟು!

ಕೋಲ್ಕತ್ತಾ: ಕಳೆದ ಒಂದು ತಿಂಗಳಿನಿಂದ ಆಹಾರ ನುಂಗಲು ಕಷ್ಟಪಡುತ್ತಿದ್ದ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬನು ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದನು. ಈ ರೋಗಿಯ ಹೊಟ್ಟೆಯಲ್ಲಿ ನೋಟುಗಳು ಪತ್ತೆಯಾಗಿವೆ. ಈ ರೋಗಿಯು ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದವನಾಗಿದ್ದು, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆತನನ್ನು ಚಿಕಿತ್ಸೆಗೆ ಒಳಪಡಿಸಿದಾಗ ಅನ್ನನಾಳದಲ್ಲಿ 100 ರೂಪಾಯಿಯ ಎರಡು ನೋಟುಗಳು ಇರುವುದು ಪತ್ತೆಯಾಗಿದೆ. ಇದನ್ನೂ ಓದಿ: ಒಂದು … Continue reading ಆಹಾರ ನುಂಗಲು ಕಷ್ಟಪಡುತ್ತಿದ್ದ ವ್ಯಕ್ತಿಯ ಅನ್ನನಾಳದಲ್ಲಿ ಸಿಕ್ತು 100ರೂ. 2 ನೋಟು!