ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕ್: ಇಬ್ಬರು ಭಾರತೀಯ ಯೋಧರು ಹುತಾತ್ಮ

LOC
Published on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಸೆಕ್ಟರ್​​ನ ಗಡಿ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆ (ಎಲ್​ಒಸಿ)ಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಪರಿಣಾಮ ಇಬ್ಬರ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ.

ಗುರುವಾರ ನಸುಕಿನ ವೇಳೆ ಈ ಗುಂಡಿನ ದಾಳಿ ನಡೆದಿತ್ತು. ಮೋರ್ಟಾರ್ಸ್ ಮತ್ತು ಇತರೆ ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಲಾಗಿತ್ತು. ಎಲ್​ಒಸಿ ಸಮೀಪದಲ್ಲಿ ನಿರಂತರವಾಗಿ ನಡೆದ ದಾಳಿಯ ಪರಿಣಾಮ ಇಬ್ಬರು ಯೋಧರು ಹುತಾತ್ಮರಾದರು. ನಾಲ್ವರು ಗಾಯಗೊಂಡರು ಎಂದು ಶ್ರೀನಗರದಲ್ಲಿರುವ ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದರು.

ಅಪ್ರಚೋದಿತ ದಾಳಿಗೆ ಭಾರತೀಯ ಸೇನೆಯೂ ಸರಿಯಾದ ಪ್ರತಿಕ್ರಿಯೆ ನೀಡಿದೆ. ಈ ನಡುವೆ, ಗಾಯಗೊಂಡವರನ್ನು ಕೂಡಲೇ ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ತಿಳಿಸಿದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net