ಶ್ರೀನಗರ: ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತ್ಮಾತರಾಗಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಗ್ರಾಮದಲ್ಲಿ ನಡೆದಿದೆ. ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹುತಾತ್ಮ ಯೋಧರನ್ನು ನಾಯಬ್ ಸುಬೇದಾರ್ ವಿಪನ್ ಕುಮಾರ್ ಮತ್ತು ಸಿಪಾಯಿ ಅರವಿಂದ್ ಸಿಂಗ್ ಎಂದು ಗುರುತಿಸಲಾಗಿದೆ. ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳನ್ನು ಘಟನಾ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದೆ. ಛತ್ರೂ ಬೆಲ್ಟ್‌ನ ನೈದ್‌ಗಾಮ್ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರ ಜಂಟಿ ಭದ್ರತಾ ತಂಡವು ಸುಳಿವು ಆಧರಿಸಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಗುಂಡಿನ ಚಕಮಕಿ ನಡೆಯಿತು.
ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರದಿಂದ ಪಾರಾಗಲು ವೈದ್ಯನ ಖಾಸಗಿ ಅಂಗವನ್ನೇ ಕಟ್ ಮಾಡಿದ ನರ್ಸ್!
ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಕಿಶ್ತ್ವಾರ್‌ನಲ್ಲಿರುವ ಚತ್ರೂ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಮಧ್ಯಾಹ್ನ 3:30ಕ್ಕೆ ಭಯೋತ್ಪಾದಕರೊಂದಿಗೆ ಸಂಪರ್ಕವನ್ನು ಸ್ಥಾಪಿಸಲಾಯಿತು. ಈ ವೇಳೆ ಶುರುವಾದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ಧಾರೆ ಎಂದು ಸೇನೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು (ಸೆಪ್ಟೆಂಬರ್ 14) ಮುಂಜಾನೆ, ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿನ ಖಂಡಾರಾ ಕಥುವಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ರೈಸಿಂಗ್ ಸ್ಟಾರ್ ಕಾರ್ಪ್ಸ್‌ನ ಪಡೆಗಳು ಖಂಡಾರಾ ಕಥುವಾದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಿದೆ. ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಸೇನೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.