ಕಲಾದಗಿ: ಘಟಪ್ರಭಾ ನದಿಗೆ ಹಿಡಕಲ್ ಡ್ಯಾಂನಿಂದ ನೀರು ಹರಿಸಬೇಕು ಎಂಬ ಬೇಡಿಕೆ ಮೇರೆಗೆ ಏ.27 ರಿಂದ 2 ಟಿಎಂಸಿ ನೀರು ಬಿಡಲಾಗುವುದು ಎಂದು ಶಾಸಕ ಜೆ.ಟಿ.ಪಾಟೀಲ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕೆ ಯೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪ್ರಾದೇಶಿಕ ಆಯುಕ್ತರ ಉಪಸ್ಥಿತಿಯಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದ ನಮ್ಮ ಕಲಾದಗಿ-ಕಾತರಕಿ ಬ್ಯಾರೇಜ್‌ಗೆ ಸಾಕಷ್ಟು ನೀರು ಬರಲಿದೆ ಎಂದರು.
TAGGED:ಕಲಾದಗಿ