2 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ: ಕಾಮುಕನ ಬಂಧನ

child
Published on

ಮಂಗಳೂರು: ಎರಡು ವರ್ಷದ ಮಗುವನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ್ದ ದುಷ್ಕರ್ಮಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಚಂದನ್(38) ಎಂಬುವ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ.

ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಗುವನ್ನು ಅಪಹರಿಸಿದ್ದ ಆರೋಪಿ, ಲೈಂಗಿಕ ಕಿರುಕುಳ ನೀಡಿ, ಫಿಶ್ ಟ್ಯಾಂಕ್ ಒಳಗೆ ಹಾಕಿದ್ದ. ಮಗುವನ್ನು ಪೋಷಕರು ಹುಡುಕಿದಾಗ ಟ್ಯಾಂಕ್ ಒಳಗೆ ಇರುವುದು ಪತ್ತೆಯಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೀವ್ರ ಅಸ್ವಸ್ಥವಾಗಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈಗ ಮಗುವಿನ‌ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಸದ್ಯ, ಮಗುವಿಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net