ಪಾಂಡವಪುರ ಅಪಘಾತದಲ್ಲಿ ಮೃತರ ಸಂಖ್ಯೆ 28ಕ್ಕೆ ಏರಿಕೆ, ಸ್ಥಳಕ್ಕೆ ಸಿಎಂ ದೌಡು

ಮಂಡ್ಯ: ಚಾಲಕನ ನಿರ್ಲಕ್ಷ್ಯದಿಂದಾಗಿ ಪಾಂಡವಪುರದ ವಿಸಿ ನಾಲೆಗೆ ಬಸ್‌ ಉರುಳಿದ ಪರಿಣಾಮ ಅಪಾರ ಸಾವು ನೋವು ಸಂಭವಿಸಿದ್ದು, ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ನಾಲೆಗೆ ಉರುಳಿತ್ತು. ಇದರಿಂದಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ.

ಇಂದು ಸಂಜೆ ನಡೆಯ ಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಮುಂದೂಡುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದು, ಅಪಘಾತ ನಡೆದ ಸ್ಥಳಕ್ಕೆ ತೆರಳಲಿದ್ದಾರೆ.

ಇನ್ನು ದಿಗ್ವಿಜಯ ನ್ಯೂಸ್‌ನೊಂದಿಗೆ ಪ್ರತ್ಯಕ್ಷದರ್ಶಿ ಚಂದನ್ ಮಾತನಾಡಿ, ಇಂದು ಮಧ್ಯಾಹ್ನ 12 ಗಂಟೆ ವೇಳೆ ನಡೆದ ಘಟನೆಯಲ್ಲಿ ಅದೃಷ್ಟವಶಾತ್ 7ನೇ ತರಗತಿ ವಿದ್ಯಾರ್ಥಿ ಪಾರಾಗಿದ್ದಾನೆ. ಬಸ್‌ನಲ್ಲಿ ಅಂದಾಜು 40 ರಿಂದ 45 ಜನರಿದ್ದರು ಎಂದು ತಿಳಿಸಿದ್ದಾರೆ.

ಬಸ್​​ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿದ್ದು, ‘ಚಾಲಕ ಪ್ರಯಾಣಿಕರನ್ನು ಕೊಲೆ ಮಾಡಿದ್ದಾನೆ’ ಎಂದು ಮಂಡ್ಯ ಉಸ್ತುವಾರಿ ಸಚಿವ ಸಿ.ಎಸ್‌. ಪುಟ್ಟರಾಜು ತಿಳಿಸಿದ್ದಾರೆ.

ನಾಲೆಯಲ್ಲಿ ಬಸ್‌ ಸಂಪೂರ್ಣ ಮುಳುಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಸದ್ಯಕ್ಕೆ 20 ಮೃತದೇಹಗಳನ್ನು ಹೊತೆಗೆಯಲಾಗಿದ್ದು, ಮಂಡ್ಯ, ಮೈಸೂರಿನಿಂದ ಆರು ಅಗ್ನಿಶಾಮಕ‌ ಮತ್ತು ತುರ್ತು ಸೇವೆಗಳ ಸಿಬ್ಬಂದಿ ನಿಯೋಜಿಸಲಾಗಿದೆ. ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಸಿಬ್ಬಂದಿ ಸೇರಿ ಸುತ್ತಮುತ್ತಲ ಗ್ರಾಮಸ್ಥರು ಪಾಲ್ಗೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)

ಪಾಂಡವಪುರ ಬಳಿ ಭೀಕರ ಅಪಘಾತ: ವಿ.ಸಿ. ನಾಲೆಗೆ ಬಸ್​ ಉರುಳಿ 20 ಪ್ರಯಾಣಿಕರ ಸಾವು

Leave a Reply

Your email address will not be published. Required fields are marked *