More

    ಅಸ್ಸಾಂನಲ್ಲಿ ಭೂಕುಸಿತಕ್ಕೆ ಇದುವರೆಗೆ 20 ಜನ ಬಲಿ

    ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ ಜೀವಂತ ಸಮಾಧಿಯಾಗಿದ್ದಾರೆ. 9 ಮಂದಿಗೆ ಗಂಭೀರ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಬಾಂಗ್ಲಾದೇಶದ ಗಡಿಗೆ ಹೊಂದಿಕೊಂಡಂತೆ ಇರುವ ಕರೀಂಗಂಜ್​ ಜಿಲ್ಲೆಯ ಕಾಳಿಗಂಜ್​ನಲ್ಲಿ ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಒಂದೇ ಕುಟುಂಬದ ಐವರು ಸೇರಿ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: ಆಧಾರ್‌ಕಾರ್ಡ್ ಮಾದರಿಯಲ್ಲಿ ಜಾನುವಾರುಗಳಿಗೂ ಬರಲಿದೆ ಐಡಿ ಕಾರ್ಡ್

    ಚಾಚಾರ್​ ಜಿಲ್ಲೆಯ ಕೋಲಾಪುರದಲ್ಲಿ ಕೂಡ ಮನೆಯ ಮೇಲೆ ಗುಡ್ಡ ಕುಸಿದು ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಹೈಲಾಕಂಡಿ ಜಿಲ್ಲೆಯ ಭಟಾಟ್​ಬಜಾರ್​ ಗ್ರಾಮದಲ್ಲಿ ಮೂವರು ಮಹಿಳೆಯರು ಸೇರಿ 7 ಮಂದಿ ಜೀವಂತ ಸಮಾಧಿಯಾಗಿದ್ದಾರೆ.

    ಫುಲೆಟ್ರಾಲ್​ ಚಾಚಾರ್​ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು, ಅಧಿಕಾರಿಗಳು ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಕೆಲವು ಮನೆಗಳ ನಿವಾಸಿಗಳನ್ನು ತೆರವುಗೊಳಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆ.

    ಆಹಾರ ಕಿಟ್​ಗಾಗಿ ಬಂದು ಕಾಲ್ತುಳಿತಕ್ಕೆ ಸಿಕ್ಕರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts