More

  20 ಶಾಸಕರು ಸಂಪರ್ಕದಲ್ಲಿ!; ಎಂಬಿಪಾ ಅಚ್ಚರಿ ಹೇಳಿಕೆ

  ಬೆಂಗಳೂರು: ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತು ಜೆಡಿಎಸ್‌ನ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರ್ಕಾಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ.
  ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕದಲ್ಲಿ ಸರ್ಕಾರ ಉರುಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಹೇಳಿದ ಅವರು
  ಜೂನ್ ಮೊದಲ ವಾರದ ನಂತರ ಶಿಂಧೆ ಸರ್ಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.
  ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದು ವಿವರಿಸಿದರು.
  ಏಕನಾಥ ಶಿಂಧೆಗೆ ಶಕ್ತಿ ಇದ್ದರೆ ನಮ್ಮ ಐದು ಶಾಸಕರನ್ನು ಮೊದಲು ತಮ್ಮತ್ತ ಸೆಳೆದುಕೊಂಡು ತೋರಿಸಲಿ. ಇನ್ನು ಒಂದೆರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಸರ್ಕಾರ ಬರಲಿದೆ ಎಂದು ಪಾಟೀಲ ಹೇಳಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts