25.7 C
Bangalore
Sunday, December 15, 2019

11 ಅಭ್ಯರ್ಥಿಗಳಿಂದ 20 ನಾಮಪತ್ರ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಯಲ್ಲಾಪುರ: ಯಲ್ಲಾಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಸೋಮವಾರ ನಾಲ್ವರು ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದರು. ಒಟ್ಟು 11 ಅಭ್ಯರ್ಥಿಗಳಿಂದ 20 ನಾಮಪತ್ರ ಸಲ್ಲಿಸಿದಂತಾಗಿದೆ.

ಸೋಮವಾರ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ ನಾಮಪತ್ರ ಸಲ್ಲಿಸಿದರು. ಪತ್ನಿ ವನಜಾಕ್ಷಿ ಹೆಬ್ಬಾರ, ವಾ.ಕ.ರಾ.ರ.ಸಾ ಸಂಸ್ಥೆಯ ಅಧ್ಯಕ್ಷ ವಿ.ಎಸ್. ಪಾಟೀಲ್, ಜಿ.ಪಂ ಸದಸ್ಯ ಎಲ್.ಟಿ. ಪಾಟೀಲ್, ದ್ಯಾಮಣ್ಣ ದೊಡ್ಮನಿ ಮುಂತಾದವರು ಇದ್ದರು. ಜೆಡಿಎಸ್ ಅಭ್ಯರ್ಥಿ ಚೈತ್ರಾ ಗೌಡ ನಾಮಪತ್ರ ಸಲ್ಲಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಬಿ. ಆರ್. ನಾಯ್ಕ, ರಾಜ್ಯ ಪ್ರಧಾನ ಕಾರ್ಯದರ್ಶಿ ಕೋನರೆಡ್ಡಿ ಉಪಸ್ಥಿತರಿದ್ದರು. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಲಕ್ಷ್ಮಣ ಬನಸೋಡೆ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ ಮೋರೆ ನಾಮಪತ್ರ ಸಲ್ಲಿಸಿದರು.

ನ.14ರಂದು ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಸೋಮವಾರ ಬಿ ಫಾಮ್ರ್ ಸಲ್ಲಿಸಿದರು. ನ.16 ರಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಜೈತುನಬಿ ಜಿಗಳೂರ, ಪಕ್ಷೇತರ ಅಭ್ಯರ್ಥಿಯಾಗಿ ಮಹೇಶ ವಿಶ್ವನಾಥ ಹೆಗಡೆ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಶಿರಸಿಯ ಕಲಗಾರಿನ ಸುನೀಲ ದೇವೇಂದ್ರ ಪವಾರ ನಾಮಪತ್ರ ಸಲ್ಲಿಸಿದ್ದರು.

ಎರಡು ತಿಂಗಳ ಹಿಂದೆ ಚುನಾವಣೆ ಘೊಷಣೆಯಾಗಿದ್ದಾಗ ಪಕ್ಷೇತರ ಅಭ್ಯರ್ಥಿಗಳಾಗಿ ನಾಗೇಶ ಬೋವಿ ವಡ್ಡರ್, ಚಿದಾನಂದ ಹರಿಜನ, ಹಮ್ಮಣ್ಣ ನಾಯ್ಕ ನಾಮಪತ್ರ ಸಲ್ಲಿಸಿದ್ದಾರೆ.

ವಿಳಂಬವಾಗಿದ್ದಕ್ಕೆ ಗೊಂದಲ: ಬಿಜೆಪಿ ಸಮಾವೇಶದಲ್ಲಿ ಕೆಲಕಾಲ ಮೈಕ್ ಕೈಕೊಟ್ಟಿದ್ದರಿಂದ ಸಮಯ ವ್ಯಯವಾಗಿ ಗೊಂದಲ ಸೃಷ್ಟಿಯಾಯಿತು. ನಾಮಪತ್ರ ಸಲ್ಲಿಕೆಗೆ ವಿಳಂಬವಾಗಲಿದೆ ಎಂದು ಹೆಬ್ಬಾರ್ ಆತಂಕಕ್ಕೆ ಒಳಗಾದರು. ನಂತರ ನಾಮಪತ್ರ ಸಲ್ಲಿಕೆ ವೇಳೆ ದಾಖಲೆ ಪರಿಶೀಲನೆ ನಡೆಯುತ್ತಿದ್ದಂತೆ ಮುಹೂರ್ತ ಮೀರಿದ್ದಕ್ಕೆ ಹೆಬ್ಬಾರ ಕೊಂಚ ಕಸಿವಿಸಿಗೊಂಡಂತೆ ಕಂಡುಬಂತು.

ಪ್ರಚಾರ ಸಾಮಗ್ರಿ ವಶ: ಅನುಮತಿ ಪಡೆಯದೆ ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿದ್ದ ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ಚುನಾವಣಾಧಿಕಾರಿಗಳು ಸೋಮವಾರ ವಶಕ್ಕೆ ಪಡೆದಿದ್ದಾರೆ. ಬ್ಯಾನರ್, ಬಂಟಿಂಗ್ಸ್, ಧ್ವಜ, ಫಲಕಗಳು ಸೇರಿ ಅಂದಾಜು 50 ಸಾವಿರ ರೂ. ಮೌಲ್ಯದ ಸಾಮಗ್ರಿಗಳನ್ನು ಸಂಚಾರಿ ಜಾಗೃತ ದಳದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಸಮಾವೇಶ ನಡೆದ ಯಲ್ಲಾಪುರ ವೈಟಿಎಸ್​ಎಸ್ ಮೈದಾನದ ಹೊರಗೂ ಅನುಮತಿ ಇಲ್ಲದೆ ಹಚ್ಚಲಾಗಿದ್ದ, ಧ್ವಜ, ಬಂಟಿಂಗ್ಸ್ ಗಳನ್ನು ಚುನಾವಣೆ ಅಧಿಕಾರಿಗಳು ತೆರವು ಮಾಡಿದ್ದಾರೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...