More

    ಎಕರೆಗೆ 20 ಸಾವಿರ ರೂ. ಪರಿಹಾರ ನೀಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ

    ವಣೂರ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಅನ್ನದಾತ ಕೃಷಿಕ ಸಮಾಜ ರಾಜ್ಯ ಘಟಕದ ವತಿಯಿಂದ ಗ್ರೇಡ್-2 ತಹಸೀಲ್ದಾರ್ ಗಣೇಶ ಸವಣೂರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

    ಜುಲೈ ಹಾಗೂ ಆಗಸ್ಟ್ ಆರಂಭದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿ ಹತ್ತಿ, ಶೇಂಗಾ, ಮೆಕ್ಕೆಜೋಳ, ಸೋಯಾಬೀನ್ ಸೇರಿದಂತೆ ಇತರ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಮಳೆಯಿಂದ ಆದ ಬೆಳೆ ಹಾನಿಗೆ ಪ್ರತಿ ಎಕರೆಗೆ 20 ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಬೇಕು. ಅಳಿದುಳಿದ ಬೆಳೆಗಳ ರಕ್ಷಣೆಗೆ ಯೂರಿಯಾ ಗೊಬ್ಬರದ ಅವಶ್ಯಕತೆ ಇದೆ. ಆದರೆ, ಗೊಬ್ಬರ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಅಲ್ಲದೆ, ಬೇರೆ ಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ ಕೊಡುವುದಾಗಿ ರಸಗೊಬ್ಬರ ಮಾರಾಟಗಾರರು ಹೇಳುತ್ತಿದ್ದಾರೆ. ಆದ್ದರಿಂದ, ತಕ್ಷಣ ಸಮರ್ಪಕವಾಗಿ ಯೂರಿಯಾ ಗೊಬ್ಬರ ಪೂರೈಸುವಂತೆ ಕ್ರಮ ಕೈಗೊಳ್ಳಬೇಕು. ಕೃಷಿ ಇಲಾಖೆಯಿಂದ ಸಹಾಯಧನದಡಿ ಕೀಟನಾಶಕ ವಿತರಿಸಬೇಕು. ಒಂದು ವಾರದಲ್ಲಿ ಬೇಡಿಕೆ ಈಡೇರಿಸದಿದ್ದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

    ರೈತ ಸಂಘ ರಾಜ್ಯ ಘಟಕ ಅಧ್ಯಕ್ಷ ಶಿವಾನಂದ ಯಲಿಗಾರ, ಬಸಲಿಂಗಪ್ಪ ದೇವಿಹೊಸೂರ, ಶಿವಯ್ಯ ಹುಚ್ಚಯ್ಯನವರ, ಗದಿಗೆಪ್ಪ ಗುದಗಿ, ನಾಗರಾಜ ದೊಡ್ಡಮನಿ, ಮಲ್ಲನಗೌಡ ದೊಡ್ಡಗೌಡ್ರ, ಸಿದ್ದನಗೌಡ ಪಾಟೀಲ, ಬಿ.ಎಸ್. ಪಾಟೀಲ, ರಮೇಶ ಹುನಗುಂದ, ಬಾಬನ್​ಸಾಬ ರಾಯಚೂರ, ಅಪ್ಪಣ್ಣ ನಾಯಕ, ಶಿವನಗೌಡ ಮುದಿಗೌಡ್ರ, ದಯಾನಂದಗೌಡ ಪಾಟೀಲ, ವಿ.ಕೆ. ಬಡಿಗೇರ, ಹನುಮಂತಪ್ಪ ಸಿದ್ದಪ್ಪನವರ, ರಮೇಶ ಆಡೂರ, ರೈತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts