

Instagram : ಪ್ರೇಮ ವೈಫಲ್ಯದಿಂದ ಮನನೊಂದ ಯಯುವಕನೊಬ್ಬ ಇನ್‌ಸ್ಟಾಗ್ರಾಮ್ ಲೈವ್‌ನಲ್ಲಿ ಆತ್ಮಹತ್ಯೆ ಮಾಡಿಕೊಂದಿದ್ದಾನೆ. ಈ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಈ ಆಘಾತಕಾರಿ ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ಬಹಳ ಬೇಗ ವೈರಲ್ ಆಗುತ್ತಿದೆ.
ಮಧ್ಯಪ್ರದೇಶದ ಶಹಪುರ್ ಪ್ರದೇಶದ 20 ವರ್ಷದ ರಾಹುಲ್ ಎಂಬ ಯುವಕ ಶಾದರ್ಪುರ್ ಪ್ರದೇಶದ ಮಹಿಳಾ ಯೂಟ್ಯೂಬರ್ ಒಬ್ಬಳನ್ನು ಪ್ರೀತಿಸುತ್ತಿದ್ದ. ಪ್ರೇಮಿಗಳ ನಡುವೆ ಮನಸ್ತಾಪ ಉಂಟಾಗಿ ಮಹಿಳೆ ರಾಹುಲ್ ಜೊತೆಗಿನ ಸಂಬಂಧವನ್ನು ಮುರಿದುಕೊಂಡ. ಇದರಿಂದ ಮನನೊಂದ ರಾಹುಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಇನ್‌ಸ್ಟಾಗ್ರಾಮ್ ಲೈವ್‌ನಲ್ಲಿ, "ಇದು ನನ್ನ ಕೊನೆಯ ವಿಡಿಯೋ. ನನಗೆ ಬದುಕಲು ಇಷ್ಟವಿಲ್ಲ. ನಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲಿದ್ದೇನೆ. ನಿಮ್ಮ ಜೀವನದಲ್ಲಿ ಯಾರನ್ನೂ ಪ್ರೀತಿಸಬೇಡಿ" ಎಂದು ಹೇಳಿದರು. ಇನ್‌ಸ್ಟಾಗ್ರಾಮ್ ಲೈವ್ ನಡೆಯುತ್ತಿರುವಾಗ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂದಿದ್ದಾನೆ.
ಇನ್‌ಸ್ಟಾಗ್ರಾಮ್‌ನಲ್ಲಿ ರಾಹುಲ್ ಲೈವ್ ನೋಡಿ ಆಘಾತಕ್ಕೊಳಗಾದ ಅವರ ಸ್ನೇಹಿತರು ತಕ್ಷಣ ಅವರ ಮನೆಗೆ ಹೋದರು. ಆ ಸಮಯದಲ್ಲಿ ರಾಹುಲ್ ಸೀಲಿಂಗ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಸ್ನೇಹಿತರು ಮತ್ತು ಪ್ರದೇಶದ ಸಾರ್ವಜನಿಕರು ನೀಡಿದ ಮಾಹಿತಿಯ ಆಧಾರದ ಸ್ಥಳಕ್ಕೆ ಹೋದ ಪೊಲೀಸರು ರಾಹುಲ್ ಮೃತದೇಹವನ್ನು ಹೊರತೆಗೆದು ಶವಪರೀಕ್ಷೆಗೆ ಕಳುಹಿಸಿದ್ದಾರೆ. ಈ ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಪ್ರೇಮ ವೈಫಲ್ಯದಿಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಸಂಚಲನ ಮೂಡಿಸಿದ್ದರೆ, ಆ ಯುವಕನ ಇನ್‌ಸ್ಟಾಗ್ರಾಮ್ ಲೈವ್ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಈ ಬಗ್ಗೆ ತೀವ್ರ ತನಿಖೆ ನಡೆಸುತ್ತಿದ್ದಾರೆ.