More

    200ಕ್ಕೂ ಹೆಚ್ಚು ಜನರಿಗೆ ಹಕ್ಕುಪತ್ರ ವಿತರಣೆ

    ನಾಗಮಂಗಲ: ಹಲವು ದಶಕಗಳ ಹಿಂದೆಯೇ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದವರಿಗೆ ಹಕ್ಕುಪತ್ರ ನೀಡುವ ಮೂಲಕ ತಮ್ಮ ಮನೆ ಹಾಗೂ ಜಮೀನಿಗೆ ಮಾಲೀಕತ್ವ ನೀಡುವ ಕೆಲಸವಾಗಿದೆ ಎಂದು ಶಾಸಕ ಸುರೇಶ್‌ಗೌಡ ಹೇಳಿದರು.

    ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತದಿಂದ ಸೋಮವಾರ ಆಯೋಜಿಸಿದ್ದ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು. ಮನೆ ನಿರ್ಮಿಸಿಕೊಂಡು ವಾಸಿಸುತ್ತಿದ್ದರೂ ಸಂಬಂಧಪಟ್ಟವರು ಯಾವುದೇ ದಾಖಲೆ ಹೊಂದಿರಲಿಲ್ಲ. ಹೀಗಾಗಿ ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಲಾಗುತ್ತಿದೆ. ಅಕ್ರಮವಾಗಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿದ್ದ 200ಕ್ಕೂ ಹೆಚ್ಚು ಜನರಿಗೆ ಮಾಲೀಕತ್ವದ ಹಕ್ಕುಪತ್ರ ನೀಡಲಾಗುತ್ತಿದೆ ಎಂದರು.

    ಕಂದಾಯ ಗ್ರಾಮಗಳಾದರೆ ಅಭಿವೃದ್ಧಿ ಕೆಲಸಗಳಿಗೆ ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಉಳಿದ ಗ್ರಾಮಗಳನ್ನೂ ಕಂದಾಯ ಗ್ರಾಮಗಳನ್ನಾಗಿಸಲು ಹಾಗೂ ಹಕ್ಕುಪತ್ರ ನೀಡಲು ಕ್ರಮವಹಿಸುವುದಾಗಿ ಭರವಸೆ ನೀಡಿದರು.

    ಬಿಂಡಿಗನವಿಲೆ ಹೋಬಳಿಯ ವಡ್ಡರಹಟ್ಟಿ, ಕಸಬಾ ಹೋಬಳಿಯ ಬಾಳನಕೊಪ್ಪಲು ಹಾಗೂ ಬೆಳ್ಳೂರು ಹೋಬಳಿಯ ರಮಾನಂದಾನಗರದ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ತಹಸೀಲ್ದಾರ್ ನಯೀಂ ಉನ್ನಿಸಾ, ತಾಪಂ ಇಒ ಚಂದ್ರಮೌಳಿ, ಮನ್ಮುಲ್ ನಿರ್ದೇಶಕ ಕೋಟಿರವಿ, ಉಪತಹಸೀಲ್ದಾರ್ ಪ್ರಸನ್ನ, ಸ್ವಾಮೀಗೌಡ, ಹರ್ಷ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts