

Dhoni| ಮೊಣಕೈ ಮೂಳೆ ಮುರಿತದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕ ರುತುರಾಜ್ ಗಾಯಕ್ವಾಡ್ ಅವರು 2025ರ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಹೊರಗುಳಿದಿದ್ದಾರೆ. ಇನ್ಮುಂದೆ ಎಂಎಸ್ ಧೋನಿ CSK ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ ಎಂದು ಏಪ್ರಿಲ್ 11, ಶುಕ್ರವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಖಚಿತಪಡಿಸಿದ್ದಾರೆ.
ಮಾರ್ಚ್ 30ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ತುಷಾರ್ ದೇಶಪಾಂಡೆ ಅವರನ್ನು ಎದುರಿಸುವಾಗ 28 ವರ್ಷದ ಗಾಯಕ್ವಾಡ್ ಮೊಣಕೈ ಗಾಯಕ್ಕೆ ಒಳಗಾದರು. ಇನ್ನೂ ಈ ಮೊಣಕೈ ಮುರಿತದಿಂದಾಗಿ ರುತುರಾಜ್ ಗಾಯಕ್ವಾಡ್ ಇಡೀ ಋತುವಿನಿಂದ ಹೊರಗುಳಿದಿದ್ದಾರೆ. ಹಾಗಾಗಿ ಈ ಬಾರಿ ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.