More

    1ರಂದು ಕೆಯುಡಬ್ಲುಜೆ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ

    ಚಿತ್ರದುರ್ಗ:ರಾಜ್ಯಕಾರ‌್ಯನಿರತ ಪತ್ರಕರ್ತರ ಸಂಘ ಹಾಗೂ ಸಂಘದ ಜಿಲ್ಲಾ ಶಾಖೆಯ ಆಶ್ರಯದಲ್ಲಿ ಏ.1ರಂದು ಬೆಳಗ್ಗೆ 10.30ಕ್ಕೆ ನಗ ರದ ಎಸ್‌ಆರ್‌ಎಸ್ ಕಾಲೇಜು ಆವರಣದಲ್ಲಿ ಕೆಯುಡಬ್ಲುಜೆ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಗಿದೆ.
    ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು ಸಮಾರಂಭವನ್ನು ಉದ್ಘಾಟಿಸುವರು ಹಾಗೂ ಪ್ರಶಸ್ತಿಗಳನ್ನು ಪ್ರದಾನ ಮಾಡುವರು.
    ರಾಜ್ಯಕಾರ‌್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸುವರು. ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಗೌಡಗೆರೆ ಪ್ರಾಸ್ತಾವಿಕವಾಗಿ ಮಾತನಾಡುವರು. ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿ ದಿಕ್ಸೂಚಿ ಭಾಷಣ ಮಾಡುವರು.
    ಡಿಸಿ ಟಿ.ವೆಂಕಟೇಶ್,ಎಸ್‌ಪಿ ಧರ್ಮೇದರ್‌ಕುಮಾರ್‌ಮೀನಾ,ಎಸ್‌ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
    ರಾಜಶೇಖರ ಕೋಟಿ ಪ್ರಶಸ್ತಿಗೆ ಚಿತ್ರದುರ್ಗದ ಚಿಕ್ಕಪ್ಪನಹಳ್ಳಿಷಣ್ಮುಖ ಹಾಗೂ ವಿಶೇಷ ಪ್ರಶಸ್ತಿಗೆ ಶ.ಮಂಜುನಾಥ್,ರವಿಮಲ್ಲಾಪುರ, ಎಸ್.ಬಿ.ರವಿಕುಮಾರ್(ರವಿಉಗ್ರಾಣ)ಹಾಗೂ ಎಚ್.ರಾಮಚಂದ್ರ ಅವರು ಭಾಜನರಾಗಿದ್ದಾರೆ. ಸಮಾರಂಭದಲ್ಲಿ ಸಂಘದ ರಾಜ್ಯ ಹಾ ಗೂ ಜಿಲ್ಲಾ ಶಾಖೆ ಪದಾಧಿಕಾರಿಗಳು ಸೇರಿದಂತೆ ವಿವಿಧ ಜಿಲ್ಲೆಗಳ ಪತ್ರಕರ್ತರು ಭಾಗವಹಿಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts