More

    21ರಿಂದ ಜಿಲ್ಲಾಮಟ್ಟದ ಸಾಹಿತ್ಯ ಸಮ್ಮೇಳನ

    ಬೆಳಗಾವಿ: ಜಿಲ್ಲಾಮಟ್ಟದ 15ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿಂಚಣಿಯ ಸಿದ್ಧಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಸಮ್ಮೇಳನವು ಡಿ.21, 22ರಂದು ಚಿಕ್ಕೋಡಿಯ ಸಿಎಲ್‌ಇ ಸಂಸ್ಥೆಯಲ್ಲಿ ಜರುಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು.

    ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 21ರಂದು ಬೆಳಗ್ಗೆ 11ಕ್ಕೆ ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ ಸಮ್ಮೇಳನ ಉದ್ಘಾಟಿಸಲಿದ್ದು, ಮಧ್ಯಾಹ್ನ 2ಕ್ಕೆ ಕನ್ನಡ ಚಿಂತನಗೋಷ್ಠಿ, ಸಂಜೆ 4ಕ್ಕೆ ಕೃಷಿ ಚಿಂತನ ಗೋಷ್ಠಿ, ಸಂಜೆ 6ಕ್ಕೆ ಸಾಂಸ್ಕೃತಿಕ ಸಂಭ್ರಮ ಜರುಗಲಿದೆ. 22ರಂದು ಬೆಳಗ್ಗೆ 9ಕ್ಕೆ ಕವಿಗೋಷ್ಠಿ, ಮಧ್ಯಾಹ್ನ 12ಕ್ಕೆ ಮಹಿಳಾ ಗೋಷ್ಠಿ, 2ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

    ಕಸಾಪ ಚಿಕ್ಕೋಡಿ ತಾಲೂಕು ಘಟಕದ ಅಧ್ಯಕ್ಷ ಡಾ.ಸುರೇಶ ಉಕ್ಕಲಿ, ಬೆಳಗಾವಿ ತಾಲೂಕು ಘಟಕದ ಅಧ್ಯಕ್ಷ ಸುರೇಶ ಹಂಜಿ, ಎಂ.ವೈ.ಮೆಣಸಿನಕಾಯಿ, ಡಾ.ಭಾರತಿ ಮಠದ, ಜಯಶೀಲಾ ಬ್ಯಾಕೋಡ ಇದ್ದರು.

    ಕೇಂದ್ರಾಡಳಿತಕ್ಕೆ ಒತ್ತಾಯಿಸಲು ಅವರ‌್ಯಾರು?: ಬೆಳಗಾವಿ ಎಂದೆಂದಿಗೂ ಕರ್ನಾಟಕ ಅವಿಭಾಜ್ಯದ ಅಂಗ. ಇದನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸಲು ಅವರ‌್ಯಾರು ಎಂದು ಕಸಾಪ ಜಿಲ್ಲಾ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ತಾಲೂಕಿನ ಬೆಳಗುಂದಿಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಸಾಹಿತಿಗಳು ಕೈಗೊಂಡ ನಿರ್ಣಯದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮರಾಠಿ ಸಾಹಿತ್ಯ ಸಮ್ಮೇಳನಗಳಲ್ಲಿ ಸಾಹಿತ್ಯ ಕ್ಷೇತ್ರದ ಬಲವರ್ಧನೆಗೆ ಪೂರಕವಾದ ನಿರ್ಣಯಗಳನ್ನು ಕೈಗೊಳ್ಳಬೇಕು. ಗಡಿ ವಿಚಾರ ಕೆದಕಿ ಗೊಂದಲ ಸೃಷ್ಟಿಸಬಾರದು. ಈ ಬಗ್ಗೆ ಸಾಹಿತಿಗಳ ಗಮನಕ್ಕೆ ತರುತ್ತೇನೆ ಎಂದರು. ಗಡಿ ವಿಚಾರವಾಗಿ ಜಿಲ್ಲೆಯ ಜನಪ್ರತಿನಿಧಿಗಳು ಮೌನ ವಹಿಸಿರುವುದು ಸರಿಯಲ್ಲ. ಮಹಾರಾಷ್ಟ್ರಕ್ಕೆ ಪ್ರತ್ಯುತ್ತರ ನೀಡಲು ಜನಪ್ರತಿನಿಧಿಗಳು ಹಾಗೂ ಕನ್ನಡ ಮನಸ್ಸುಗಳೆಲ್ಲ ಒಗ್ಗೂಡಲೇಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts