More

    21 ಲಕ್ಷ ರೂ. ದಂಡ ವಸೂಲಿ – ಎಸ್ಪಿ ಲಕ್ಷ್ಮಣ ನಿಂಬರಗಿ


    ಬೆಳಗಾವಿ: ಕರೊನಾ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿ ಉಲ್ಲಂಸಿ ಮಾಸ್ಕ್ ಧರಿಸದವರ ವಿರುದ್ಧ ಈವರೆಗೆ ಬೆಳಗಾವಿ ನಗರ ಹೊರತುಪಡಿಸಿ ಜಿಲ್ಲೆಯಲ್ಲಿ 21 ಸಾವಿರ ಪ್ರಕರಣ ದಾಖಲಾಗಿದೆ. ಜತೆಗೆ, 21 ಲಕ್ಷ ರೂಪಾಯಿಗಿಂತ ಅಧಿಕ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ದೈಹಿಕ ಅಂತರ ನಿಯಮ ಉಲ್ಲಂಘಿಸಿದ 4,569 ಜನರ ವಿರುದ್ಧ ಪ್ರಕರಣ ದಾಖಲಿಸಿ, 4,26,900 ರೂ. ದಂಡ ವಿಧಿಸಲಾಗಿದೆ. ಅಲ್ಲದೆ, ಅನಗತ್ಯವಾಗಿ ಸಂಚರಿಸುತ್ತಿದ್ದ 5,534 ಜನರ ಬೈಕ್‌ಸೀಜ್ ಮಾಡಲಾಗಿದೆ. ಎನ್‌ಡಿಪಿಎಸ್ ಕಾಯ್ದೆ ಅಡಿ 228 ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕ ಅಪಿಡೆಮಿಕ್ ಕಾಯ್ದೆ ಅಡಿ 64 ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.

    ಜಿಲ್ಲೆಯಾದ್ಯಂತ ಸುಮಾರು 117 ಚೆಕ್ ಪೋಸ್ಟ್ ಕಾರ್ಯಾಚರಣೆಯಲ್ಲಿವೆ. 670ಕ್ಕೂ ಅಧಿಕ ಬ್ಯಾರಿಕೇಡ್ ಅಳವಡಿಸಿ ಎಲ್ಲ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಕೋವಿಡ್ ಮೊದಲ ಅಲೆಯಲ್ಲಿ ಮಾಸ್ಕ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 23,897 ಪ್ರಕರಣ ದಾಖಲಿಸಿಕೊಂಡು, 23,89,700 ರೂ. ದಂಡ ವಿಧಿಸಲಾಗಿತ್ತು. ಅಲ್ಲದೆ, ದೈಹಿಕ ಅಂತರ ಕಾಪಾಡದ 2,776 ಜನರ ವಿರುದ್ಧ ಕ್ರಮ ಜರುಗಿಸಿ 2,264 ಬೈಕ್, ನಾಲ್ಕು ಚಕ್ರದ 100 ವಾಹನ ಸೀಜ್ ಮಾಡಲಾಗಿತ್ತು ಎಂದರು.

    ಲಾಕ್‌ಡೌನ್‌ನಲ್ಲೂ ಕೆಲವೆಡೆ ಜನ ಮೌಢ್ಯದ ಮೊರೆ ಹೋಗುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪಾಲಿಸಬೇಕು ಎಂದು ನಿಂಬರಗಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts