

Athletes Die: ನೈಜೀರಿಯಾದಲ್ಲಿ ಶನಿವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 21 ಯುವ ಕ್ರೀಡಾ ಪಟುಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ನೈಜೀರಿಯಾದ ಓಗುನ್ ರಾಜ್ಯ ಆಯೋಜಿಸಿದ್ದ 22ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತರ ನೈಜೀರಿಯಾದ ಕಾನೊಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.
"ಇದು ರಾಷ್ಟ್ರೀಯ ದುರಂತ" ಎಂದು ನೈಜೀರಿಯಾದ ಕ್ರೀಡಾ ಸಚಿವಾಲಯ ಮಾಧ್ಯಮಗಳಿಗೆ ತಿಳಿಸಿದೆ. ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದ ಚಾಲನೆಯಿಂದ ಅಪಘಾತ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಸೂಚಿಸಲಾಗಿದೆ. ಆದಾಗ್ಯೂ, ಅಧಿಕಾರಿಗಳು ಅಪಘಾತದ ಬಗ್ಗೆ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದ್ದಾರೆ.(ಏಜೆನ್ಸೀಸ್)