25.1 C
Bangalore
Friday, December 6, 2019

21 ಮಂದಿಗೆ ಮಂಗನ ಕಾಯಿಲೆ ದೃಢ

Latest News

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಕೆಎಂಸಿ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ
ಉಡುಪಿ: ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಆಸುಪಾಸಿನ 59 ಜನರು ಇಲ್ಲಿಯವರೆಗೆ ಶಂಕಿತ ಮಂಗನ ಕಾಯಿಲೆಗೆ ಚಿಕಿತ್ಸೆ ಪಡೆಯಲು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಲ್ಲಿ 21 ಜನರಿಗೆ ಮಂಗನ ಕಾಯಿಲೆ ದೃಢಪಟ್ಟಿದ್ದು, ಚಿಕಿತ್ಸೆ ಮುಂದುವರಿದಿದೆ.

ದಾಖಲಾದವರಲ್ಲಿ 34 ಮಂದಿಗೆ ಮಂಗನ ಕಾಯಿಲೆ ಇಲ್ಲ ಎಂಬ ವರದಿ ಬಂದಿದೆ. ಈಗಾಗಲೇ 33 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೆಎಂಸಿ ಆಸ್ಪತ್ರೆ ತಿಳಿಸಿದೆ.

 ಲಕ್ಷಣ, ನಿಯಂತ್ರಣ: ಜ್ವರ, ಚಳಿಜ್ವರ ಮತ್ತು ತಲೆನೋವು ಮಂಗನ ಕಾಯಿಲೆಯ ಆರಂಭಿಕ ಲಕ್ಷಣ. 3ರಿಂದ 8 ದಿನಗಳಲ್ಲಿ ವಾಂತಿಯೊಂದಿಗೆ ಮೈ ಕೈ ನೋವು, ಜಠರ, ಕರುಳಿನ ರೋಗಲಕ್ಷಣಗಳು ಮತ್ತು ರಕ್ತಸ್ರಾವ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಕಡಿಮೆ ರಕ್ತದೊತ್ತಡ, ಕಡಿಮೆ ಪ್ಲೇಟ್‌ಲೆಟ್ ಸಂಖ್ಯೆ, ಕೆಂಪು ರಕ್ತಕಣ ಮತ್ತು ಬಿಳಿ ರಕ್ತಕಣಗಳ ಸಂಖ್ಯೆ ಇಳಿಮುಖವಾಗುವ ಲಕ್ಷಣ ಬರಬಹುದು. ರೋಗ ಲಕ್ಷಣ ಕಾಣಿಸಿಕೊಂಡ 1ರಿಂದ 2 ವಾರ ಬಳಿಕ ಕೆಲವು ರೋಗಿಗಳು ಯಾವುದೇ ತೊಂದರೆಯಿಲ್ಲದೆ ಚೇತರಿಸಿಕೊಳ್ಳುತ್ತಾರೆ.

ಇನ್ನು ಕೆಲವು ರೋಗಿಗಳಲ್ಲಿ ಮೂರನೇ ವಾರದ ಆರಂಭದಲ್ಲಿ ದ್ವಿತೀಯ ಹಂತದ ರೋಗಲಕ್ಷಣ ಕಾಣಿಸಿಕೊಳ್ಳುತ್ತವೆ. ಈ ರೋಗ ಲಕ್ಷಣಗಳಲ್ಲಿ ಜ್ವರ, ನರ ಸಂಬಂಧಿ, ತೀವ್ರ ತಲೆನೋವು, ಮಾನಸಿಕ ತೊಂದರೆ, ನಡುಕ ಮತ್ತು ದೃಷ್ಟಿ ನ್ಯೂನತೆ ಸೇರಿವೆ. ಕೆಎಫ್‌ಡಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಆಸ್ಪತ್ರೆಗೆ ದಾಖಲಿಸಿ ದೇಹಾರೋಗ್ಯಕ್ಕೆ ಸಹಾಯಕವಾಗುವ ಚಿಕಿತ್ಸೆ ಒದಗಿಸುವುದು ಮುಖ್ಯ. ಸಹಾಯಕ ಚಿಕಿತ್ಸೆ ಅಂದರೆ ದೇಹದಲ್ಲಿ ಸಾಕಷ್ಟು ನೀರಿನಂಶ ಇರುವಂತೆ ನೋಡಿಕೊಳ್ಳುವುದು ಮತ್ತು ರಕ್ತಸ್ರಾವದ ತೊಂದರೆ ಇರುವ ರೋಗಿಗಳಿಗೆ ವಿಶೇಷ ಮುಂಜಾಗೃತಾ ಕ್ರಮ ವಹಿಸುವುದು ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ತಜ್ಞ ವೈದ್ಯರಾದ ಡಾ. ಕವಿತಾ ಸರವು, ಡಾ.ಶಿಪ್ರ ರೈ ತಿಳಿಸಿದ್ದಾರೆ.

ಕಾರ್ಕಳದಲ್ಲಿ ಮಂಗನ ಶವ ಪತ್ತೆ
ಕಾರ್ಕಳ: ಹಿರ್ಗಾನ ಚಿಕ್ಕಲಬೆಟ್ಟು ಕ್ರಾಸ್ ಬಳಿ ಗುರುವಾರ ಮಂಗನ ಶವ ಪತ್ತೆಯಾಗಿದೆ. ಈ ಬಗ್ಗೆ ಸ್ಥಳೀಯ ಗ್ರಾಪಂ ಅಧ್ಯಕ್ಷ ಸಂತೋಷ್ ಶೆಟ್ಟಿ ಪಶು ವೈದ್ಯರಿಗೆ ಮಾಹಿತಿ ನೀಡಿದ್ದು, ಪಶುವೈದ್ಯ ಡಾ.ಸುಬ್ರಹ್ಮಣ್ಯ ಹಾಗೂ ಹಿರ್ಗಾನ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯ ಡಾ.ಶಮಾ ಶುಕುರ್ ಮರಣೋತ್ತರ ಪರೀಕ್ಷೆ ನಡೆಸಿದರು. ಪತ್ತೆಯಾದ ಮಂಗನ ದೇಹದಲ್ಲಿ ಮೇಲ್ನೋಟಕ್ಕೆ ಯಾವುದೇ ರೋಗಲಕ್ಷಣ ಕಂಡುಬಂದಿಲ್ಲ. ಹೆಚ್ಚಿನ ತಪಾಸಣೆಗಾಗಿ ಅಂಗಾಂಶಗಳನ್ನು ಶಿವಮೊಗ್ಗದ ವಿಡಿಎಲ್‌ಗೆ ರವಾನಿಸಲಾಗಿದೆ. ಮಂಗಳವಾರ ಮತ್ತು ಬುಧವಾರ ಸಿದ್ದಾಪುರ, ಹೊಸಂಗಡಿ, ಶಿರೂರುಗಳಲ್ಲಿ ಐದು ಮಂಗಗಳ ಮೃತದೇಹ ಪತ್ತೆಯಾಗಿದ್ದು, ಕಾರ್ಕಳದಲ್ಲಿ ಇನ್ನೊಂದು ಪತ್ತೆಯಾಗುವುದರೊಂದಿಗೆ ಮೃತಪಟ್ಟ ಮಂಗಗಳ ಸಂಖ್ಯೆ 6ಕ್ಕೇರಿದೆ.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...