More

    ಪಾಕಿಸ್ತಾನದಲ್ಲೂ ತಾಂಡವವಾಡುತ್ತಿದೆ ಭಯೋತ್ಪಾದನೆ; 21 ಉಗ್ರರ ಹತ್ಯೆ

    ನವದೆಹಲಿ:  ಸಾರ್ವತ್ರಿಕ ಚುನಾವಣೆಯ ಭರಾಟೆಯಲ್ಲಿ ಇರುವ ಪಾಕಿಸ್ತಾನದಲ್ಲಿ ಪ್ರಚಾರ ಕಣ ಹಲವು ಅಚ್ಚರಿ, ವಿವಾದ ಹಾಗೂ ಎಡವಟ್ಟುಗಳಿಗೆ ಕಾರಣವಾಗುತ್ತಿದೆ. ಉಗ್ರರ ದಾಳಿ ಭೀತಿ ನಡುವಲ್ಲೇ ದೇಶಾದ್ಯಂತ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ ಸಮಾವೇಶಗಳನ್ನು ನಡೆಸುತ್ತಿವೆ. ಇನ್ನು ಪಾಕಿಸ್ತಾನದಲ್ಲಿ ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆಯೊಂದಿಗೆ ನಂಟು ಹೊಂದಿದ 21 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

    ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಪಾಕಿಸ್ತಾನ ಸೇನೆಯೂ ಬಲೂಚಿಸ್ತಾನ ಪ್ರಾಂತ್ಯದಲ್ಲಿ 21 ಉಗ್ರರನ್ನು ಹತ್ಯೆ ಮಾಡಿದೆ. ಮೃತಪಟ್ಟಿರುವ ಉಗ್ರರು ಈ ಹಿಂದೆ ಬಲೂಚಿಸ್ತಾನ ಪ್ರದೇಶದಲ್ಲಿ ಮೂರು ಸಂಘಟಿತ ದಾಳಿಗಳನ್ನು ನಡೆಸಿದ್ದರು ಎಂದು ತಿಳಿದು ಬಂದಿದೆ.

    ಇದನ್ನೂ ಓದಿ: ಜನಸಂಖ್ಯೆ ನಿಯಂತ್ರಣಕ್ಕೆ ಸಮಿತಿ ರಚನೆ; ಮುಸ್ಲಿಂ ಸಮುದಾಯಕ್ಕೆ ಕಳಂಕ ತರುವ ಯತ್ನ ಎಂದ ವಿಪಕ್ಷಗಳು

    ಈ ಕುರಿತು ಪ್ರತಿಕ್ರಿಯಿಸಿರುವ ಸೇನೆಯ ಹಿರಿಯ ಅಧಿಕಾರಿಯೊಬ್ಬರು, ಮಾಚ್ ಮತ್ತು ಕೋಲ್ಪುರ ಪ್ರದೇಶದಲ್ಲಿ ಬಲೂಚ್ ಲಿಬರೇಶನ್ ಆರ್ಮಿ ಮುಜಾಹಿದ್ ಬ್ರಿಗೇಡ್ ಜೊತೆ ಸಂಪರ್ಕ ಹೊಂದಿದ್ದ ಉಗ್ರರು ಅಡಗಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದ್ದು, 21 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ನಾಲ್ವರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ.

    ಬಲೂಚಿಸ್ತಾನದ ಮಾಚ್ ಪಟ್ಟಣದಲ್ಲಿರುವ ಕಾರಾಗೃಹದ ಮೇಲೆ ಈ ಉಗ್ರರು ದಾಳಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಮ್ಮ ಸೇನೆಯು ಅವರ ವಿರುದ್ಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ 21 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts