More

    ಚಿತ್ರದುರ್ಗ: ಜಿಲ್ಲೆಯಲ್ಲಿರುವ ಡಾ.ಎಪಿಜೆ ಅಬ್ದುಲ್ ಕಲಾಂ, ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಮೇ 19 ರ ಬೆಳಗ್ಗೆ 11 ಗಂಟೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ವಸತಿ ಶಾಲೆಗಳ ಪ್ರಾಚಾರ್ಯರಿಂದ ಪ್ರವೇಶ ಪತ್ರ ಪಡೆದು ಪ್ರವೇಶ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ. ಹಿರಿಯೂರು ತಾಲೂಕು ದೇವರಕೊಟ್ಟ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಪ್ರವೇಶ ಬಯಸಿರುವ ವಿದ್ಯಾರ್ಥಿಗಳಿಗೆ ಹಿರಿಯೂರು ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ಚಳ್ಳಕೆರೆ ಅಲ್ಪಸಂಖ್ಯಾತ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಪ್ರವೇಶ ಬಯಸಿರುವ ವಿದ್ಯಾರ್ಥಿಗಳು, ಚಳ್ಳಕೆರೆ ಹೆಗ್ಗೆರೆ ತಾಯಮ್ಮ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಹಾಗೂ ಚಿತ್ರದುರ್ಗ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಪ್ರವೇಶ ಬಯಸಿರುವ ವಿದ್ಯಾರ್ಥಿಗಳು, ಚಿತ್ರದುರ್ಗ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ಬರೆಯಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts