More

    20 ಕೆರೆ ತುಂಬಿಸಲು 229 ಕೋಟಿ ಬಿಡುಗಡೆ

    ರಾಣೆಬೆನ್ನೂರ: ತಾಲೂಕಿನ 20 ಕೆರೆಗಳನ್ನು ತುಂಬಿಸಲು ಸಿಎಂ ಬಿ.ಎಸ್. ಯಡಿಯೂರಪ್ಪನವರು 229 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಶೀಘ್ರದಲ್ಲಿಯೇ ಸಿಎಂ ಕರೆಯಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.

    ನಗರದಲ್ಲಿ ಸ್ಥಳೀಯ ನಗರಸಭೆಯ 2020-21ನೇ ಸಾಲಿನ ಎಸ್​ಎಫ್​ಸಿ ವಿಶೇಷ ಅನುದಾನದಡಿ 5 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

    ಕರೊನಾ ಸಮಯದಲ್ಲೂ ರಾಜ್ಯ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ. ಆದ್ದರಿಂದ ಬಿ.ಎಸ್. ಯಡಿಯೂರಪ್ಪ ಅವರಿಂದಲೇ ತಾಲೂಕಿನ ಕೆರೆ ತುಂಬಿಸುವ ಕಾಮಗಾರಿಗೆ ಚಾಲನೆ ನೀಡಲಾಗುವುದು. ನಗರದ ಅಭಿವೃದ್ಧಿಗಾಗಿ ಈಗಾಗಲೇ 29 ಕೋಟಿ ರೂಪಾಯಿ ನೀಡಿದ್ದಾರೆ. ಈ ಅನುದಾನದಲ್ಲಿ ನಗರದ ಎಲ್ಲ ವಾರ್ಡ್​ಗಳಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸಲಾಗುವುದು ಎಂದರು.

    ರೇಷ್ಮೆ ಹಾಗೂ ತೋಟಗಾರಿಕೆ ಸಚಿವ ಆರ್. ಶಂಕರ, ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ಉಪಾಧ್ಯಕ್ಷೆ ಕಸ್ತೂರಮ್ಮ ಚಿಕ್ಕಬಿದರಿ, ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದಪ್ಪ ಬಾಗಲವರ, ಸದಸ್ಯರಾದ ಮಲ್ಲಣ್ಣ ಅಂಗಡಿ, ರಾಘು ಕುಲಕರ್ಣಿ, ಹುಚ್ಚಪ್ಪ ಮೇಡ್ಲೇರಿ, ನಾಗರಾಜ ಪವಾರ, ಪ್ರಕಾಶ ಪೂಜಾರ, ಉಷಾ ಚಿನ್ನಿಕಟ್ಟಿ, ಮೈಲಪ್ಪ ಗೋಣಿಬಸಮ್ಮನವರ, ಚನ್ನಪ್ಪ ತೋಟಪ್ಪನವರ, ಎನ್​ಡ್ಲ್ಯೂಕೆಎಸ್​ಆರ್​ಟಿಸಿ ನಿರ್ದೇಶಕ ಸಂತೋಷಕುಮಾರ ಪಾಟೀಲ, ಮಂಜುನಾಥ ಓಲೇಕಾರ, ಸಿದ್ದು ಚಿಕ್ಕಬಿದರಿ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts