More

    23 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ


    ಯಾದಗಿರಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ.23 ರಿಂದ ಜೂನ್ 03 ರ ವರೆಗೆ ನಡೆಯಲಿದ್ದು, 8 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 4321 ವಿದ್ಯಾಥರ್ಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಕಾರಿ ಸ್ನೇಹಲ್ ಆರ್., ತಿಳಿಸಿದರು.

    ಮಂಗಳವಾರ ನಗರದ ಜಿಲ್ಲಾಕಾರಿ ಕಚೇರಿಯ ಸಭಾಂಗಣದಲ್ಲಿ ಪರೀಕ್ಷೆ ಹಿನ್ನೆಲೆಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಕಾರಿಗಳು ಪರೀಕ್ಷೆಗೆ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಂಡು ಸುವ್ಯವಸ್ಥಿತ ಹಾಗೂ ಶಾಂತಿಯುತವಾಗಿ ಜರುಗುವಂತೆ ಕ್ರಮ ವಹಿಸಬೇಕು. ಕೇಂದ್ರಗಳಿಗೆ ಜಿಲ್ಲೆಯ ಒಟ್ಟು 94 ಪದವಿ ಪೂರ್ವ ಕಾಲೇಜುಗಳ ದ್ವಿತೀಯ ಪಿಯುಸಿ ವಿದ್ಯಾಥರ್ಿಗಳನ್ನು ಜೋಡಿಸಲಾಗಿದೆ ಎಂದು ವಿವರಿಸಿದರು.

    ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಮೊಬೈಲ್, ಕೈ ಗಡಿಯಾರ ತರುವಂತಿಲ್ಲ. ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ನಿಷೇತ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಲಾಗುವುದು. ಸುರಕ್ಷತೆಗೆ ಪೊಲೀಸರು ಸಮಯಕ್ಕಿಂತ ಮುಂಚಿತವಾಗಿಯೇ ತೆರಳಬೇಕು. ಇನ್ನೂ ವಾಟರ್ ಬಾಯ್ಗಳ ನೇಮಕವನ್ನು ರದ್ದುಪಡಿಸಲಾಗಿದೆ. ಕೊಠಡಿಗಳ ಅಂತರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

    ಅಪರ ಜಿಲ್ಲಾಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಡಿಡಿಪಿಯು (ಪ್ರಭಾರಿ) ಚನ್ನಬಸಪ್ಪ ಕುಳಗೇರಿ, ಜಿಲ್ಲಾ ಖಜಾನೆ ಅಕಾರಿ ಮಾಳಿಂಗರಾಯ, ಅಣ್ಣರಾವ್ ಪಾಟೀಲ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts