More

    ಕೇರಳ ಗಡಿಯ 23 ಕಡೆ ಸಿಸಿ ಕ್ಯಾಮೆರಾ, ಸಚಿವ ಅಂಗಾರ ಮಾಹಿತಿ

    ಸುಬ್ರಹ್ಮಣ್ಯ: ಅಹಿತಕರ ಘಟನೆ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಪಾಲನೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ವಿಶೇಷ ಗಮನ ಹರಿಸಿದೆ. ಕೇರಳ ಗಡಿ ಭಾಗದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದ್ದು, ಗಡಿಯ 23 ಕಡೆ ಅತ್ಯಾಧುನಿಕ ಸಿ.ಸಿ.ಕ್ಯಾಮರಾ ಅಳವಡಿಸಲು ಸರ್ಕಾರ ಕ್ರಮಕೈಗೊಂಡಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.


    ಭಾನುವಾರ ಸುಬ್ರಹ್ಮಣ್ಯದಲ್ಲಿ ಕಾರ್ಯಕರ್ತರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆ ಮುಂದುವರಿದಿದ್ದು, ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಅಪರಾಧಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
    ಪ್ರವೀಣ್ ಹತ್ಯೆ ಬಳಿಕ ಸರ್ಕಾರ ಮನೆಯವರ ಕಷ್ಟಕ್ಕೆ ಸ್ಪಂದಿಸಿದೆ. ಸಿಎಂ ಸಹಿತ ಸಚಿವರು ಮನೆಗೆ ಭೇಟಿ ನೀಡಿದ್ದಾರೆ. ನಾನು ದೆಹಲಿಯಲ್ಲಿದ್ದರೂ ಮರುದಿನವೇ ಬೆಳ್ಳಾರೆಗೆ ಆಗಮಿಸಿದ್ದೆ. ತನಿಖೆಯನ್ನು ಎನ್‌ಐಎಗೆ ವಹಿಸಲಾಗಿದೆ. ಮನಸ್ಸಿನ ನೋವಿನಿಂದ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ ಎಂದ ಅವರು ಬಿಜೆಪಿ ಸಾಮಾನ್ಯ ಕಾರ್ಯಕರ್ತನ ಕಷ್ಟ ಸುಖಕ್ಕೂ ಸ್ಪಂದಿಸುತ್ತದೆ ಎಂದರು.


    ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಪಂ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಪ್ರಮುಖರಾದ ಶಿವಪ್ರಸಾದ್ ನಡುತೋಟ, ದಿನೇಶ್ ಸಂಪ್ಯಾಡಿ, ರಾಜೇಶ್ ಎನ್.ಎಸ್., ರಾಜೇಶ್ ಕುಲ್ಕುಂದ, ಚಿದಾನಂದ ಕಂದಡ್ಕ, ಅಶೋಕ್ ಆಚಾರ್ಯ, ವೆಂಕಟೇಶ್ ಎಚ್.ಎಲ್, ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts