More

    ಹಿಪ್ಪರಗಿ ಜಲಾಶಯಕ್ಕೆ 23 ಸಾವಿರ ಕ್ಯೂಸೆಕ್ ನೀರು

    ರಬಕವಿ/ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ರಾಜಾಪುರ ಜಲಾಶಯದಿಂದ ಕೃಷ್ಣೆಗೆ ಅಪಾರ ನೀರು ಹರಿದು ಬರುತ್ತಿದೆ.

    ಕಳೆದ ಮೂರು ದಿನಗಳಲ್ಲಿ ಉತ್ತಮ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಹಿಪ್ಪರಗಿ ಜಲಾಶಯಕ್ಕೆ ಬುಧವಾರ 24 ಸಾವಿರ ಕ್ಯೂಸೆಕ್ ನೀರು ಹರಿದು ಬಂದಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿ ಬಿಡಲಾಗುತ್ತಿದೆ.

    ಸಂಗ್ರಹಕ್ಕೆ ಒತ್ತುಕೊಡದ ಕಾರಣ ಹಿಪ್ಪರಗಿ ಜಲಾಶಯದಲ್ಲಿ ತಳಮಟ್ಟದಲ್ಲಿಯೇ ನೀರಿದೆ. ನದಿ ವ್ಯಾಪ್ತಿಯ ಜನವಸತಿ ಪ್ರದೇಶಗಳಿಗೆ ನೀರಿನ ಅಭಾವ ತಪ್ಪಿಸುವ ಸಲುವಾಗಿ ನೀರನ್ನು ಹಿಡಿದಿಟ್ಟುಕೊಳ್ಳದೆ ಬಂದಷ್ಟು ನೀರನ್ನು ಕೃಷ್ಣೆಗೆ ಹರಿಬಿಡಲಾಗಿದೆ.

    ದೂರಾದ ನೀರಿನ ಸಮಸ್ಯೆ: ಹಿಪ್ಪರಗಿ ಜಲಾಶಯ ಒಡಲು ತುಂಬದಿದ್ದರೂ ಪೂರ್ಣ ಪ್ರಮಾಣದಲ್ಲಿ ಕೃಷ್ಣೆ ಹರಿಯುತ್ತಿದ್ದು, ಕುಡಿವ ನೀರಿನ ಅಭಾವ ದೂರಾಗಿದೆ. ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ನೀರಿನ ಸಮಸ್ಯೆ ನಿವಾರಣೆಯಾಗಿದೆ. ಆದರೆ,ಕೃಷಿ ಭೂಮಿಗೆ ಪರಿಪೂರ್ಣವಾಗಿ ನೀರು ಬಳಸಲು ಇನ್ನೂ ಅವಕಾಶ ಸಿಕ್ಕಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts