More

    ಎಸ್​ಸಿ, ಎಸ್​​ಟಿ ಗುತ್ತಿಗೆದಾರರಿಗೆ ಬಂಪರ್! ಟೆಂಡರ್​ನಲ್ಲಿ ಶೇ. 24 ಮೀಸಲಾತಿ

    ಬೆಂಗಳೂರು: ಎಸ್​ಸಿ, ಎಸ್​​ಟಿ ಗುತ್ತಿಗೆದಾರರಿಗೆ ಶೇ. 24ರವರೆಗೆ ಮೀಸಲಾತಿ ನೀಡಲಾಗುವುದು. 50 ಲಕ್ಷ ರೂ.ನಿಂದ 1 ಕೋಟಿ ರೂ. ವರೆಗಿನ ಟೆಂಡರ್​ನಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

    ಪ್ರಸ್ತುತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ 50 ಲಕ್ಷ ರೂ. ಗಳ ವರೆಗಿನ ಸಣ್ಣ ಕಾಮಗಾರಿಗಳಲ್ಲಿ ಶೇ.24ರವರೆಗೆ ಮೀಸಲಾತಿ ನಿಗದಿಪಡಿಸಿದ್ದು, ಈ ಮೊತ್ತವನ್ನು ಒಂದು ಕೋಟಿ ರೂ. ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ.

    ವಸತಿ ಶಾಲೆಗಳಲ್ಲಿನ ಕ್ರೀಡಾ ಪ್ರತಿಭೆಗಳ ಪ್ರೋತ್ಸಾಹಕ್ಕೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಒಟ್ಟು 10 ಕ್ರೈಸ್ ವಸತಿ ಶಾಲೆಗಳಲ್ಲಿ, ಒಂದು ಶಾಲೆಗೆ ಒಂದರಂತೆ, ಉತ್ಕೃಷ್ಟ ಮಟ್ಟದ ಕ್ರೀಡಾ ಸೌಲಭ್ಯವನ್ನು 10 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು ಎಂದು ಬೊಮ್ಮಾಯಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ. ಈ ಬಾರಿಯ ಬಜೆಟ್​ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಆಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts