More

    2,417 ವಿದ್ಯಾರ್ಥಿಗಳು ಗೈರು

    ಧಾರವಾಡ: ಹು-ಧಾ ಅವಳಿ ನಗರದ 23 ಪರೀಕ್ಷೆ ಕೇಂದ್ರಗಳಲ್ಲಿ ಗುರುವಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸುಸೂತ್ರವಾಗಿ ಜರುಗಿತು. ಕರೊನಾ ಹರಡುವಿಕೆ ಹಿನ್ನೆಲೆಯಲ್ಲಿ ಎಲ್ಲ ಕೇಂದ್ರಗಳಿಗೂ ಮುಂಚಿತವಾಗಿ ಸ್ಯಾನಿಟೈಸ್ ಮಾಡಲಾಗಿತ್ತು. ಪ್ರತಿ ವಿದ್ಯಾರ್ಥಿಗೆ ಮುಖ್ಯದ್ವಾರಗಳಲ್ಲೇ ಜ್ವರ ಪರೀಕ್ಷೆ ನಡೆಸಿ ಪ್ರವೇಶ ನೀಡಲಾಯಿತು. ಧಾರವಾಡದ 12 ಹಾಗೂ ಹುಬ್ಬಳ್ಳಿಯ 11 ಕೇಂದ್ರಗಳಲ್ಲಿ ಪರೀಕ್ಷೆ ಜರುಗಿತು.

    ಗುರುವಾರ ಬೆಳಗ್ಗೆ 10.30ರಿಂದ 11.50ರವರೆಗೆ ಜರುಗಿದ ಜೀವಶಾಸ್ತ್ರ ಪರೀಕ್ಷೆಗೆ 7,799 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 1,685 ವಿದ್ಯಾರ್ಥಿಗಳು ಗೈರಾಗಿ 6,114 ವಿದ್ಯಾರ್ಥಿಗಳು ಹಾಜರಾಗಿದ್ದರು.

    ಮಧ್ಯಾಹ್ನ 2.30ರಿಂದ 3.50ರವರೆಗೆ ಜರುಗಿದ ಗಣಿತಶಾಸ್ತ್ರ ಪರೀಕ್ಷೆಗೆ 7,799 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 732 ವಿದ್ಯಾರ್ಥಿಗಳು ಗೈರಾಗಿ 7,067 ವಿದ್ಯಾರ್ಥಿಗಳು ಹಾಜರಾಗಿದ್ದರು.

    ಕರೊನಾ ಪಾಸಿಟಿವ್ ಹೊಂದಿದ್ದ ಇಬ್ಬರು ವಿದ್ಯಾರ್ಥಿಗಳು ಹಾಗೂ ಒಬ್ಬ ಬಾಲಕಿಗೆ ನಗರದ ಪೊಲೀಸ್ ಹೆಡ್ ಕ್ವಾರ್ಟರ್ಸ್​ನ ಮಹಿಳಾ ಹಾಸ್ಟೆಲ್​ನಲ್ಲಿ ತೆರೆಯಲಾಗಿದ್ದ ಪ್ರತ್ಯೇಕ ಕೇಂದ್ರದಲ್ಲಿ ಪರೀಕ್ಷೆ ನಡೆಸಲಾಯಿತು.

    ಪ್ರತಿ ಕೇಂದ್ರದಲ್ಲಿ ಒಬ್ಬರು ಹಿರಿಯ ಪ್ರಾಚಾರ್ಯ, ಉಪನ್ಯಾಸಕರನ್ನು ಪ್ರಶ್ನೆಪತ್ರಿಕೆ ಪಾಲಕರನ್ನಾಗಿ, ಇಬ್ಬರು ಉಪನ್ಯಾಸಕರನ್ನು ವಿಶೇಷ ಜಾಗೃತ ದಳದ ಸದಸ್ಯರನ್ನಾಗಿ, ಒಬ್ಬ ಉಪನ್ಯಾಸಕನನ್ನು ಕೋವಿಡ್- 19 ಮೇಲ್ವಿಚಾರಕರನ್ನಾಗಿ ನೇಮಕ ಮಾಡಲಾಗಿತ್ತು. ಆರೋಗ್ಯ ತಪಾಸಣೆಗೆ ಆರೋಗ್ಯ ಇಲಾಖೆ ವತಿಯಿಂದ ಇಬ್ಬರು ಸಿಬ್ಬಂದಿಯನ್ನು ನೇಮಕ ಮಾಡಲಾಗಿತ್ತು.

    ಶುಕ್ರವಾರ ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts