More

    245 ಶಾಲಾ ಕೊಠಡಿ ಮಂಜೂರು

    ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಭಾರತ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 17ರಲ್ಲಿ ಸೋಮವಾರ ವಿವೇಕ ಶಾಲಾ ಕೊಠಡಿಗಳ ಶಂಕುಸ್ಥಾಪನೆ ಹಾಗೂ ಶಾಲಾ ಕೊಠಡಿ ಉದ್ಘಾಟನೆ ನೆರವೇರಿಸಿದರು.

    ಜಿಲ್ಲೆಯಲ್ಲಿ ವಿವೇಕ ಯೋಜನೆಯಡಿ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ 245 ಕೊಠಡಿಗಳು ಮಂಜೂರಾಗಿವೆ. 35.67 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಪ್ರಾಥಮಿಕ ಶಾಲೆಗಳಿಗೆ ಒಂದು ಕೊಠಡಿಗೆ 19.90 ಲಕ್ಷ ರೂ., ಪ್ರೌಢ ಶಾಲೆಗಳ ಒಂದು ಕೊಠಡಿಗೆ 16.90 ಲಕ್ಷ ನಿಗದಿಪಡಿಸಲಾಗಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 275 ಶಾಲಾ ಕೊಠಡಿಗಳು ಮಂಜೂರಾಗಿದ್ದು, 39.22 ಕೋಟಿ ರೂ. ಮಂಜೂರಾಗಿದೆ. ಜಿಲ್ಲೆಯ ವಿವಿಧ ವಿಧಾನ ಸಭಾ ಕ್ಷೇತ್ರಗಳಲ್ಲಿ ಆಯಾ ಕ್ಷೇತ್ರದ ಶಾಸಕರಿಂದ ಉದ್ಘಾಟನೆಗೊಳ್ಳುತ್ತಿವೆ ಎಂದು ಕಾರಜೋಳ ತಿಳಿಸಿದರು.

    ಕೊಠಡಿ ದುರಸ್ತಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 30 ಲಕ್ಷ ರೂ.ನಂತೆ ಬೆಳಗಾವಿ ಶೈಕ್ಷಣಿಕ ಜಿಲ್ಲೆಗೆ 70 ಶಾಲೆಗಳ 211 ಕೊಠಡಿಗಳಿಗೆ 2.55 ಕೋಟಿ ರೂ. ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 85 ಶಾಲೆಗಳ 234 ಕೊಠಡಿಗಳಿಗೆ 2.85 ಕೋಟಿ ರೂ. ಬಿಡುಗಡೆಯಾಗಿದ್ದು, ರಿಪೇರಿ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಶಾಸಕ ಅಭಯ ಪಾಟೀಲ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಪಂ ಸಿಇಒ ಎಚ್.ವಿ. ದರ್ಶನ್, ಡಿಡಿಪಿಐ ಬಸವರಾಜ ನಾಲತವಾಡ, ಬಿಇಒ ರವಿ ಭಜಂತ್ರಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts