More

    25ರಂದು 75 ರೋಬೋಟ್ಸ್ ಕಿ ಸಲಾಮಿ

    ಬೆಳಗಾವಿ: ಭರತೇಶ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ನಿಮಿತ್ತ ಆ.25ರಂದು ನಗರದ ಹಳೆಯ ಪಿಬಿ ರಸ್ತೆಯಲ್ಲಿರುವ ರೂಪಾಲಿ ಕನ್ವೆನ್ಶನ್ ಸಭಾಂಗಣದಲ್ಲಿ 75 ರೋಬೋಟ್ಸ್ ಕಿ ಸಲಾಮಿ ಎಂಬ ದಾಖಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಭರತೇಶ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ರಾಜೀವ ದೊಡ್ಡಣ್ಣವರ ತಿಳಿಸಿದರು.

    ನಗರದ ಭರತೇಶ ಶಿಕ್ಷಣ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಹೊಸ ತಂತ್ರಜ್ಞಾನದೊಂದಿಗೆ ಉತ್ತಮ ಶಿಕ್ಷಣ ನೀಡುವ ಉತ್ತೇಜಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳ ಜತೆಗೆ ಬೇರೆ ಶಾಲೆಯ ವಿದ್ಯಾರ್ಥಿಗಳೂ ಪ್ರಯೋಜನ ಪಡೆದುಕೊಳ್ಳಲಿದ್ದಾರೆ ಎಂದರು.

    ಬೆಳಗಾವಿ ಜಿಲ್ಲೆಯ 6 ರಿಂದ 10 ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಜಿಲ್ಲೆಯ ಎಲ್ಲ 74 ಅಟಲ್ ಟಿಂಕರಿಂಗ್ ಪ್ರಯೋಗಾಲಯಗಳಿಗೆ ಉತ್ತೇಜನ ನೀಡುವ ಒಂದು ಕಾರ್ಯಕ್ರಮವಾಗಿದೆ. ಅಟಲ್ ಟಿಂಕರಿಂಗ್ ಪ್ರಯೋಗಾಲಯಗಳು ಇಲ್ಲದ ಶಾಲೆಗಳಿಗೂ ಕೂಡ ಇದರಲ್ಲಿ ಮುಕ್ತವಾಗಿ ಭಾಗವಹಿಸುವ ಅವಕಾಶವಿದೆ. ಈ ಕಾರ್ಯಕ್ರಮದಲ್ಲಿ 75ಕ್ಕಿಂತಲೂ ಹೆಚ್ಚಿನ ಶಾಲೆಗಳಿಂದ ಸುಮಾರು 160 ಕ್ಕಿಂತಲೂ ಹೆಚ್ಚು ತಂಡಗಳು ಭಾಗವಹಿಸುತ್ತಿವೆ ಎಂದರು 75 ರೋಬೋಟ್ಸ್ ಕಿ ಸಲಾಮಿ ಇದು ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತವಾಗಿ ಹಮ್ಮಿಕೊಳ್ಳಲಾದ ಒಂದು ಬೃಹತ್ ಕಾರ್ಯಕ್ರಮ. ಅದರಲ್ಲಿ ಭಾಗವಹಿಸುವ 75 ಶಾಲೆಯ ತಂಡಗಳ ರೋಬೋಟ್ಸ್‌ಗಳು ಪದಸಂಚಲನ ಮಾಡುವುದರೊಂದಿಗೆ ಹೊಸ ದಾಖಲೆ ನಿರ್ಮಿಸಲಿವೆ. ನಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ಸಹಾಯವಾಗುವಂತಹ ರೋಬೋಟ್ಸ್‌ಗಳನ್ನು ತಯಾರಿಸುವ ಒಂದು ಸ್ಪರ್ಧೆ. ಭಾಗವಹಿಸುವ ಪ್ರತಿಯೊಂದು ತಂಡದಲ್ಲಿ ಇಬ್ಬರು ವಿದ್ಯಾರ್ಥಿಗಳು ಇರುತ್ತಾರೆ. ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದರು. ಸಂಸ್ಥೆಯ ಕಾರ್ಯದರ್ಶಿ ಶ್ರೀಪಾಲ ಖೇಮಾಲಾಪುರೆ, ಆಡಳಿತ ಮಂಡಳಿಯ ಸದಸ್ಯ ಹಿರಾಚಂದ ಕಲಮನಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts