ವಿಜಯಪುರ: ನ್ಯಾಷನಲ್ ಹೆರಾಲ್ಡ್ ನಮ್ಮ ಪಕ್ಷ ನಡೆಸುವಂತಹ ಪತ್ರಿಕೆ ಅದಕ್ಕೆ ನಾನು ಹಾಗೂ ಸುರೇಶ್ 25 ಲಕ್ಷ ದುಡ್ಡು ಕೊಟ್ಟಿದ್ದೇವೆ, ನಮ್ಮ ಟ್ರಸ್ಟ್ ನಿಂದಲೂ ದೇಣಿಗೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಪಾಕ್ ಆರ್ಥಿಕತೆಗೆ ಹೊಡೆತ; ಭಯೋತ್ಪಾದನೆಗೆ ಹಣಕಾಸು ಒದಗಿಸುವ ಸಂಸ್ಥೆಯನ್ನು ಸಂಪರ್ಕಿಸಲು ಭಾರತ ಸಿದ್ಧತೆ| Raise-issue
ದೇಣಿಗೆ ನೀಡಿರುವುದರಿಂದ ನಿಮಗೆ ತೊಂದರೆಯಾಗುತ್ತದೆಯೇ ಎಂದಾಗ ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಇಂದು (23) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ದುಡಿದಂತಹ ಆಸ್ತಿಯಿಂದ ರಾಜರೋಷವಾಗಿ ಹಣ ನೀಡಿದ್ದೇವೆ, ನಾವು ಕದ್ದುಮುಚ್ಚಿ ಹಣ ನೀಡಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಸುಳ್ಳಿಗೆ ಇನ್ನೊಂದು ಹೆಸರು ಕುಮಾರಸ್ವಾಮಿ
ಇನ್ನೂ ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೆಚ್ಡಿಕೆ ವಿರುದ್ಧ ಕಿಡಿಕಾರಿದರು. ಕುಮಾರಸ್ವಾಮಿ ಒಬ್ಬ ಮೆಂಟಲ್ ಅವರ ಮಾನಸಿಕ ಆರೋಗ್ಯ ಹದಗೆಟ್ಟಿರಬೇಕು. ತಲೆ ಕೆಟ್ಟು ಹೋಗಿದೆ ಎಂದು ಜರಿದರು. ರಾಮನಗರದ ನಾಮಫಲಕಕ್ಕೆ ಚಿನ್ನದ ತಗಡು ಹೊಡೆಯಲಾಗುತ್ತದೆಯೇ ಎನ್ನುವ ಕುಮಾರಸ್ವಾಮಿ ಅವರ ಸರಣಿ ಟೀಕೆಗಳ ಬಗ್ಗೆ ಮಾತನಾಡಿದ ಉಪಮುಖ್ಯಮಂತ್ರಿಗಳು, ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು, ಹಾಸನದಲ್ಲಿಯೇ ಏಕೆ ರಾಜಕೀಯ ಮಾಡಲಿಲ್ಲ. ಎಚ್.ಡಿ.ಕುಮಾರಸ್ವಾಮಿ ಎನ್ನುವ ಹೆಸರಿನಲ್ಲಿರುವ ಅವರ ಊರಿನ ಹೆಸರು ಹಾಗೂ ತಂದೆಯ ಹೆಸರನ್ನು ಏಕೆ ಇನ್ನೂ ಇಟ್ಟುಕೊಂಡಿದ್ದಾರೆ, ಮೊದಲು ಅದನ್ನು ಬದಲಾವಣೆ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ: ಭಾರತೀಯ ನಿಯೋಗ ಆಗಮಿಸುವ ಮೊದಲೇ ಮಾಸ್ಕೋ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ| Drone Attack
ನಾವು ಬೆಂಗಳೂರು ಜಿಲ್ಲೆಯವರು. ಒಂದೊಂದು ಊರಿನ ಹೆಸರಿಗೆ ತನ್ನದೇ ಆದ ಇತಿಹಾಸವಿರುತ್ತದೆ. ಮದ್ರಾಸ್ ಅನ್ನು ಮತ್ತೆ ಏಕೆ ಚೆನ್ನೈ ಎಂದು ಕರೆದರು. ಗುಲ್ಬರ್ಗಾವನ್ನು ಕಲಬುರ್ಗಿ ಎಂದು ಮರುನಾಮಕರಣ ಮಾಡಲಾಗಿದೆ. ನಮಗೂ ನಮ್ಮದೇ ಆದಂತಹ ಆಸೆ ಇರುತ್ತದೆ. ಅವರಿಗೆ ಏನು ತೊಂದರೆಯಾಗಿದೆ ಎಂದು ಪ್ರಶ್ನಿಸಿದರು.
ರಿಯಲ್ ಎಸ್ಟೇಟ್ಗಾಗಿ ಹೆಸರು ಬದಲಾವಣೆ ಮಾಡಲಾಗಿದೆ ಎನ್ನುವ ಆರೋಪದ ಬಗ್ಗೆ ಮಾತನಾಡಿದ ಡಿಸಿಎಂ, ಹೌದು ನಮ್ಮ ಹಳ್ಳಿಯ ಜನ ಉದ್ದಾರವಾಗಬೇಕು. ಎಲ್ಲರಿಗೂ ಉದ್ಯೋಗ ಸಿಗಬೇಕು. ನಮ್ಮ ಜನರ ಆಸ್ತಿ ಮೌಲ್ಯ ಜಾಸ್ತಿಯಾಗಬೇಕು. ಪ್ರತಿಯೊಬ್ಬ ರೈತನಿಗೂ ಒಳ್ಳೆಯದಾಗಬೇಕು. ಹೊರಗಡೆ ದೇಶದಿಂದ ಜನರು ಬಂದು ಬಂಡವಾಳ ಹೂಡಿಕೆ ಮಾಡಬೇಕು. ಅಭಿವೃದ್ಧಿ ಆಗಬೇಕು ಎಂಬುದು ನಮ್ಮ ಆಸೆ ಎಂದರು.
ಮಹಿಳಾ ಉದ್ಯೋಗಿಗೆ ಹೆರಿಗೆ ರಜೆ ನೀಡಲು ಯಾವುದೇ ಕಂಪನಿ ನಿರಾಕರಿಸುವಂತಿಲ್ಲ; ಸುಪ್ರೀಂಕೋರ್ಟ್| Maternity leave