34ರ ಮಹಿಳೆಯೊಂದಿಗೆ 25ರ ಯುವಕನ ಲವ್ವಿ ಡವ್ವಿ: ಗರ್ಭಿಣಿ ಆದ್ಮೇಲೆ ಟೀಚರ್‌ಗೆ ಕೈಕೊಟ್ಟು ಪರಾರಿ!

teavher
Published on

ಮೈಸೂರು: ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಯೊಂದಿಗೆ ಲವ್ವಿ ಡವ್ವಿ ನಡೆಸುತ್ತಿದ್ದ ಯುವಕ, ಆಕೆಯನ್ನ ಗರ್ಭಿಣಿ ಮಾಡಿ ನಂತರ ಪರಾರಿಯಾಗಿರುವ ಘಟನೆ ಮೈಸೂರಿನ ಸರಸ್ವತಿಪುರಂ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

34 ವರ್ಷದ ಸಂತ್ರಸ್ತೆ ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ಆರೋಪಿ ಯುವಕನನ್ನು ಹರೀಶ್ (25) ಎಂದು ಗುರುತಿಸಲಾಗಿದೆ.

ಪಿರಿಯಾಪಟ್ಟಣ ಮೂಲದ ಮಹಿಳೆ ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾದ್ದಾರೆ. 2018 ರಲ್ಲಿ ಗಂಡನಿಂದ ವಿಚ್ಛೇದನ ಪಡೆದ ಶಿಕ್ಷಕಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ಆಗ ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ ಎಂಬಾತ ಪರಿಚಯವಾಗಿ, ಇಬ್ಬರ ನಡುವೆ ಸಂಬಂಧ ಇತ್ತು ಎನ್ನಲಾಗಿದೆ. ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಅತ್ಯಾಚಾರ ಮಾಡಿದ್ದಾನೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಅಲ್ಲದೇ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂದು ಸರಸ್ವತಿಪುರಂ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ಆರೋಪಿ ಹರೀಶ್ ನನ್ನ ಮೇಲೆ ಅತ್ಯಾಚಾರ ಮಾಡಿ ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ, ಪೊಲೀಸರಿಂದ ನನಗೆ ನ್ಯಾಯ ಸಿಗುವ ಭರವಸೆಯಿದೆ. ಆತ ನನ್ನನ್ನ ಮದುವೆಯಾದ್ರೆ ಕೇಸ್ ವಾಪಸ್ ಪಡೆಯುತ್ತೇನೆ. ನನಗೆ ನ್ಯಾಯಕೊಡಿಸಿಕೊಡಿ ಎಂದು ನೊಂದ ಮಹಿಳೆ ಅಂಗಲಾಚಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net